Sunday, June 26, 2022

Latest Posts

ಗಣಪತಿ ಬೀದಿ ರಸ್ತೆ ವಿಸ್ತರಣೆ ಕಾಮಗಾರಿ ಸ್ಥಗಿತ: ಎಂಎಲ್‍ಸಿ ವೀಣಾ ಅಚ್ಚಯ್ಯ ಅಸಮಾಧಾನ

ಹೊಸದಿಗಂತ ವರದಿ,ಮಡಿಕೇರಿ:
ನಗರದ ಗಣಪತಿ ಬೀದಿ ರಸ್ತೆ ವಿಸ್ತರಣೆ ಕಾರ್ಯ ಸ್ಥಗಿತಗೊಂಡಿದ್ದು, ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ಭೇಟಿ ನೀಡಿ ಪರಿಶೀಲಿಸಿದರು.
ಕಾಮಗಾರಿಯನ್ನು ಪೂರ್ಣಗೊಳಿಸದೆ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು ಸ್ಥಳೀಯರ ಅಹವಾಲನ್ನು ಆಲಿಸಿದರು.
ರಸ್ತೆ ವಿಸ್ತರಣೆಗೆ ಸ್ಥಳೀಯ ನಿವಾಸಿಗಳು ಸಂಪೂರ್ಣ ಸಹಕಾರವನ್ನು ನೀಡಿದ್ದರೂ ಕಾಮಗಾರಿಯನ್ನು ಅರ್ಧದಲ್ಲೇ ಸ್ಥಗಿತಗೊಳಿಸಲಾಗಿದೆ. ಮನೆಗಳು, ಅಂಗಡಿ ಮಳಿಗೆಗಳು ಧೂಳುಮಯವಾಗಿದ್ದು, ವಾಸ ಮಾಡುವುದೇ ಕಷ್ಟವಾಗಿದೆ ಎಂದು ನಿವಾಸಿಗಳು ಬೇಸರ ವ್ಯಕ್ತಪಡಿಸಿದರು. ರಸ್ತೆ ವ್ಯವಸ್ಥೆಯಿಂದ ವಾಹನ ಸಂಚಾರ ಅಸಾಧ್ಯವಾಗಿದೆ ಎಂದು ಚಾಲಕರು ಅಸಮಾಧಾನ ವ್ಯಕ್ತಪಡಿಸಿದರು.
ಗುಣಮಟ್ಟದ ಕಾಮಗಾರಿಯನ್ನು ತಕ್ಷಣ ಆರಂಭಿಸಿ ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ನಗರಸಭೆ ಸೂಚನೆ ನೀಡಬೇಕೆಂದು ವೀಣಾ ಅಚ್ಚಯ್ಯ ಒತ್ತಾಯಿಸಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ನಗರಾಧ್ಯಕ್ಷೆ ಫ್ಯಾನ್ಸಿ ಪಾರ್ವತಿ, ನಗರಸಭಾ ಮಾಜಿ ಸದಸ್ಯ ಪ್ರಕಾಶ್ ಆಚಾರ್ಯ, ವಿಧಾನ ಪರಿಷತ್ ಸದಸ್ಯರ ಆಪ್ತ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಪ್ರಮುಖರಾದ ಪ್ರಭು ರೈ ಮತ್ತಿತರರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss