ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ನಗರದಲ್ಲಿ ನಡೆಯಲಿರುವ ಎರಡು ದಿನ ಗಾಂಧಿ ಭಾರತ್ ಕಾರ್ಯಕ್ರಮ ಹಿನ್ನೆಲೆ ಕಾಂಗ್ರೆಸ್ ನಾಯಕರ ದಂಡೆ ಆಗಮಿಸಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಇಡೀ ಮಂತ್ರಿ ಮಂಡಲ ಮತ್ತು ಕಾಂಗ್ರೆಸ್ ನಾಯಕರು ಈಗಾಗಲೇ ಬೆಳಗಾವಿಯಲ್ಲಿ ಬಿಡು ಬಿಟ್ಟಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಹಿಮಾಚಲ ಸಿಎಂ ಸುಖ್ವಿಂದ್ರ ಸಿಂಗ್ ಸುಖು, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಶಶಿ ತರೂರ್, ಅಶೋಕ್ ಗೆಹ್ಲೋಟ್, ಸಚಿನ್ ಫೈಲಟ್, ವೇಣುಗೋಪಾಲ್, ಯುವ ಕಾಂಗ್ರೆಸ್ ಮುಖಂಡ ಕನ್ಹಯ್ಯ ಸೇರಿದಂತೆ ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳ ಸಚಿವರು, ಶಾಸಕರು ಮತ್ತು ಸಂಸತ್ತಿನ ಸದಸ್ಯರು ಬೆಳಗಾವಿಗೆ ಬಂದಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪಕ್ಷದ ನಾಯಕರಿಗೆ ಭರ್ಜರಿ ಸ್ವಾಗತ ಕೋರಿದ್ದಾರೆ.