ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಎಲ್ಲಾ ಶಾಲೆಗಳಲ್ಲಿ ಅ. 2 ರಂದು ಕಡ್ಡಾಯವಾಗಿ ‘ಗಾಂಧಿ ಜಯಂತಿ’ ಆಚರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ರಾಷ್ಟ್ರೀಯ ಹಬ್ಬಗಳನ್ನು ನಾಡ ಹಬ್ಬಗಳನ್ನು ಮತ್ತು ಪ್ರಮುಖ ಜಯಂತಿಗಳನ್ನು ಆಯಾ ದಿನದಂದು ಕಡ್ಡಾಯವಾಗಿ ಗೌರವಪೂರ್ವಕವಾಗಿ ಆಚರಿಸಲು ಕ್ರಮವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಮತ್ತು ರಾಜ್ಯದ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಉಲ್ಲೇಖ-01 ರಂತೆ ಈಗಾಗಲೇ ಅಗತ್ಯ ನಿರ್ದೇಶನಗಳನ್ನು ನೀಡಲಾಗಿರುತ್ತದೆ.