ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧೀಜಿಯವರ ಹೆಸರನ್ನು ಮರುನಾಮಕರಣ ಮಾಡುವ ಮೂಲಕ ಅವರ ತತ್ತ್ವಗಳನ್ನು ಶಾಶ್ವತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ಮನ್‌ರೇಗಾ ಯೋಜನೆಯ ಮರುಸ್ಥಾಪನೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಪಂಚಾಯತ್ ರಾಜ್ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದರು. “ಬಡವರ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದರ ವಿರುದ್ಧ ನಾವು ಜೈಲಿಗೆ ಹೋಗಲು ಸಿದ್ಧರಿದ್ದೇವೆ. ರಾಜ್ಯಪಾಲರು ಈ ಕೂಡಲೇ ಮಧ್ಯಪ್ರವೇಶಿಸಿ ಕೇಂದ್ರದ ಮೇಲೆ ಒತ್ತಡ ಹೇರಬೇಕು,” ಎಂದು ಅವರು ಒತ್ತಾಯಿಸಿದರು.



