ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾತ್ಮಾ ಗಾಂಧಿಯವರರ ಪುಣ್ಯಸ್ಮರಣೆ ಮತ್ತು ಹುತಾತ್ಮರ ದಿನಾಚರಣೆಯಾಗಿರುವ ಇಂದು ನಗರದ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರು ಶ್ರದ್ಧಾಂಜಲಿ ಸಲ್ಲಿಸಿದರು.
ಮಹಾತ್ಮಾ ಗಾಂಧಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು ಮತ್ತು ಕಾಂಗ್ರೆಸ್ ಪಕ್ಷ ಸಂವಿಧಾನ ವಿರೋಧಿಗಳ ವಿರುದ್ಧ ಹೋರಾಡುತ್ತಿದೆ, ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.