ಗಾಂಧೀಜಿ, ಶಾಸ್ತ್ರಿಯವರ ಜಯಂತಿ: ರಕ್ತದಾನ ಶಿಬಿರ ಆಯೋಜನೆ

ಹೊಸದಿಗಂತ ವರದಿ,ಕಲಬುರಗಿ:

ಹಿಂದು ಜಾಗರಣ ವೇದಿಕೆಯ ಅಡಿಯಲ್ಲಿ ನಗರದ ಐತಿಹಾಸಿಕ ಕೋಟೆಯ ಮುಂಭಾಗದಲ್ಲಿ ಪ್ರತಿಷ್ಠಾಪನೆ ಮಾಡಲಾದ ಹಿಂದು ಮಹಾಗಣಪತಿ ಸಮಿತಿ ಕಲಬುರಗಿ ವತಿಯಿಂದ ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಅಂಗವಾಗಿ ಸೋಮವಾರ ಬೃಹತ್ ರಕ್ತ ದಾನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.

ಭಾರತ ಮಾತೆಯ ಭಾವಚಿತ್ರಕ್ಕೆ, ಮಹಾತ್ಮಾಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ಉತ್ತರ
ಪ್ರಾಂತದ ಪ್ರಾಂತ ಪ್ರಚಾರಕರಾದ ನರೇಂದ್ರ ಜೀ, ಶ್ರೀಧರ್ ನಾಡಿಗೇರ , ಕಲಬುರಗಿ ವಿಭಾಗದ ವಿಭಾಗ ಪ್ರಚಾರಕರಾದ ವಿಜಯ ಮಹಾಂತೇಶ, ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕ ನಾಗೇಂದ್ರ ಕಾಬಡೆ ಸೇರಿದಂತೆ ಸಮಿತಿಯ ಹಲವು ಪದಾಧಿಕಾರಿಗಳು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.

ಒಟ್ಟು ೩೦ ರಕ್ತದಾನಿಗಳು ಶಿಬಿರಕ್ಕೆ ಆಗಮಿಸಿ ತಮ್ಮ ರಕ್ತದಾನ ಮಾಡುವ ಮೂಲಕ ಇತರರಿಗೆ ಪ್ರೇರಣೆ ನೀಡುವಂತಹ ಕೆಲಸಕ್ಕೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ಸಮಿತಿಯ ಸಿದ್ದಯ್ಯ ಮಠಪತಿ,ಪ್ರಸನ್ನ ಜೋಶಿ, ವಿನಯ ಹೋಸಮಠ, ಶ್ರೀಶೈಲ ಮುಲಗೆ ,ಸಿದ್ದರಾಜ ಬಿರಾದಾರ,ಸೇರಿದಂತೆ ಹಲವು ಗಣ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!