ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಟ್ಟಿದ ಸೂರ್ಯ ಮುಳುಗಲೇ ಬೇಕು ಹಾಗೆಯೇ ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ, ಆರ್ಟಿಕಲ್ 21ರ ಮೂಲಕ ಸಾಂವಿಧಾನಿಕವಾಗಿ ಕಾಂಗ್ರೆಸ್ ಪಕ್ಷ ನೀಡಿದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಕಾರ್ಯಕ್ರಮವನ್ನು ಬಿಜೆಪಿ ಮುಟ್ಟುವ ಧೈರ್ಯ ಮಾಡುತ್ತದೆ ಎಂದುಕೊAಡಿರಲಿಲ್ಲ. ಆದರೆ ಈಗ ಮನರೇಗಾ ಹೆಸರನ್ನು ಬದಲಾವಣೆ ಮಾಡಲು ಹೊರಟಿರುವುದು ನೋಡಿದರೆ ಬಿಜೆಪಿಯ ಅಂತ್ಯ ಪ್ರಾರಂಭವಾಗಿದೆ ಎಂದು ನನಗೆ ಅನಿಸುತ್ತಿದೆ ಎಂದರು.
ಬಡವರಿಗೆ ಕೊಟ್ಟ ಕಾರ್ಯಕ್ರಮದ ಕುತ್ತಿಗೆ ಹಿಸುಕುವ ಕೆಲಸ ಮಾಡಲಾಗುತ್ತಿದೆ. ದೇಶದ ಬಡಜನತೆಗೆ ಎಸಗುತ್ತಿರುವ ದ್ರೋಹವಿದು. ಇದಕ್ಕಿಂತ ದೊಡ್ಡ ಅವಮಾನವಿಲ್ಲ. ಮುಂಬರುವ 27ರಂದು ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಹೆಸರು ಬದಲಾವಣೆ ಹಿಂಪಡೆಯುವ ತನಕ ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ಹೋರಾಟ ರೂಪಿಸಲಾಗುವುದು ಎಂದು ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ದೆಹಲಿಯಲ್ಲಿ ಮಂಗಳವಾರ (ಡಿ.23) ಸಭೆ ಕರೆದಿದ್ದಾರೆ. ಇಲ್ಲಿ ಇದರ ಬಗ್ಗೆ ಚರ್ಚೆ ನಡೆಸಲಾಗುವುದು. ಕೇಂದ್ರ ಸರ್ಕಾರ ಹೇಳಿದ ಅನುಪಾತದಲ್ಲಿ ಯಾವ ರಾಜ್ಯ ಸರ್ಕಾರವೂ ಹಣ ನೀಡಲು ಸಾಧ್ಯವಿಲ್ಲ. ಈ ರೀತಿ ಆದರೆ ಕಾರ್ಯಕ್ರಮ ಸತ್ತು ಹೋದಂತೆ. ಇದನ್ನು ಸಮಾಧಿ ಮಾಡಲಾಗಿದೆ. ಕೊಲೆ ಮಾಡಲಾಗಿದೆ ಎಂದರು.
ಗಾಂಧಿ ಹೆಸರು ತಗ್ದಿದಾರೆ, ಬಿಜೆಪಿ ಕಡೆದಿನಗಳು ಆರಂಭವಾಗಿದೆ: ಡಿಕೆಶಿ

