ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಗಸ್ಟ್ 27 ರಂದು ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಆದೇಶಿಸಲಾಗಿದೆ.
ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ಬುಧವಾರದಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.