ಗಣೇಶ ಹಬ್ಬದ ಸಂಭ್ರಮಕ್ಕೆಸಿಗಲಿದೆ ವರುಣನ ಸಾಥ್: ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರದ ಮುನ್ಸೂಚನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರಾವಳಿಯ ಜಿಲ್ಲೆಗಳಲ್ಲಿ ಹಬ್ಬದ ವಾತಾವರಣ. ಎಲ್ಲೆಡೆ ಗಣೇಶನ ಹಬ್ಬದ ಆಚರಣೆಗೆ ಭರದ ಸಿದ್ದತೆಗಳು ನಡೆಯುತ್ತಿದೆ. ಇದರ ನಡುವೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 18 ಮತ್ತು 19 ರಂದು ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೋಮವಾರ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ ಎಂದು ಹೇಳಿದೆ.

ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಆದ್ದರಿಂದ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಅದೇ ರೀತಿ ಬೆಂಗಳೂರು ನಗರದಲ್ಲಿ ಮುಂದಿನ 2 ದಿನ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಹಾಗೂ ರಾತ್ರಿಯ ವೇಳೆಗೆ ಹಗುರ/ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!