Thursday, August 18, 2022

Latest Posts

ಗಣೇಶ ವಿಸರ್ಜನೆಗೆ ಹೊಂಡ ನಿರ್ಮಾಣಕ್ಕಾಗಿ ಮುಖ್ಯಮಂತ್ರಿಗೆ ಮನವಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಬೀದರ್:

ಜಿಲ್ಲೆಯ ವಿವಿಧ ಬೇಡಿಕೆಗಳಿಗಾಗಿ ಕೇಂದ್ರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದ ನಿಯೋಗವೊಂದು ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿತು.
ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಬಾಬು ವಾಲಿ ಅವರು ಬೀದರ್ ನಗರದಲ್ಲಿ ಸಾಮೂಹಿಕ ಗಣೇಶೋತ್ಸವ ಆಚರಿಸಿ ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ಹೊಂಡ ನಿರ್ಮಾಣಕ್ಕಾಗಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಿಂದ ಬೀದರ ನಗರದಲ್ಲಿ ಗಣೇಶ ವಿಸರ್ಜನೆ ಹೊಂಡ ನಿರ್ಮಿಸಲು 2 (ಕೋಟಿ) ಅನುದಾನ ನೀಡಬೇಕೆಂದು ಮನವಿ ಮಾಡಿದರು.
ಬೀದರ್‍ನಲ್ಲಿ ಸುಸಜ್ಜಿತವಾದ ಹೊಂಡ ನಿರ್ಮಾಣಕ್ಕಾಗಿ ಮಾಡಿದ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಬೀದರ್ ನಗರಾಭಿವೃದ್ಧಿ ಪ್ರಾ„ಕಾರದ ಅಧ್ಯಕ್ಷರಾದ ಬಾಬು ವಾಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರದ ರಸಾಯನಿಕ ಹಾಗೂ ರಸಗೊಬ್ಬರ ರಾಜ್ಯ ಸಚಿವರಾದ ಭಗವಂತ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಕೆಎಸ್‍ಐಐಡಿಸಿ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಬೀದರ್ ನಗರಾಭಿವೃದ್ಧಿ ಪ್ರಾ„ಕಾರದ ಅಧ್ಯಕ್ಷ ಬಾಬು ವಾಲಿ, ರಾಜ್ಯ ಹಜ್ ಕಮಿಟಿ ಅಧ್ಯಕ್ಷ ರË-ÉÇೀದ್ದಿನ್ ಕಚೇರಿವಾಲೆ, ಬಿಎಸ್‍ಎಸ್‍ಕೆ ಅಧ್ಯಕ್ಷ ಸುಭಾಷ ಕಲ್ಲೂರ, ಮಾಜಿ ಶಾಸಕ ಎಂಜಿ ಮೂಳೆ, ಮುಖಂಡರಾದ ಡಿಕೆ ಸಿದ್ರಾಮ, ಡಾ. ಸಿದ್ದು ಪಾಟೀಲ್, ದಿಗಂಬರರಾವ ಮಾನಕಾರೆ, ಸೋಮನಾಥ ಪಾಟೀಲ್ ಸೇರಿದಂತೆ ಇನ್ನಿತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!