ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣೇಶ ಹಬ್ಬ ಆಚರಣೆಗೆ ದೇಶವೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸೆ.18ರಂದು ಸಾರ್ವತ್ರಿಕ ರಜೆಯನ್ನು ಸರ್ಕಾರ ಘೋಷಣೆಮಾಡಿದೆ.
ಆದರೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜನರಿಗೆ ಸೆ.19 ಪ್ರಮುಖ ಹಬ್ಬದ ದಿನವಾಗಿದ್ದು, ಈ ಹಿನ್ನಲೆ ಸ್ಥಳೀಯ ಪರಿಸ್ಥಿತಿಗಳ ಅನುಸಾರ ಜಿಲ್ಲಾಧಿಕಾರಿಗಳ ಮನವಿ ಮೇರೆಗೆ ಈ ಜಿಲ್ಲೆಗಳಲ್ಲಿ ಸೆ.18ರ ಬದಲಾಗಿ ಸೆ.19ರ ಮಂಗಳವಾರ ಗಣೇಶ ಹಬ್ಬದ ರಜೆಯನ್ನು ಘೋಷಣೆ ಮಾಡಲಾಗಿದೆ.