ಹೊಸದಿಗಂತ ಡಿಜಿಟಲ್ ಡೆಸ್ಕ್;
ಎಲ್ಲೆಡೆ ಗಣೇಶ ಹಬ್ಬದ ಸಂಭ್ರಮ. ಜೊತೆಗೆ ಸಾಲು ಸಾಲು ರಜೆ. ಈ ಹಿನ್ನೆಲೆಯಲ್ಲಿ ಜನರು ತಮ್ಮ ತಮ್ಮ ಊರುಗಳಿಗೆ ಜನರು ತೆರಳುತ್ತಿದ್ದಾರೆ.
ಈ ನಿಟ್ಟಿನಲ್ಲಿ ನಗರದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಕೆ.ಆರ್.ಪುರಂನ ಐಟಿಐ ಗೇಟ್, ಆನಂದ್ ರಾವ್ ಸರ್ಕಲ್ನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು, ಸವಾರರು ಪರದಾಡಿದ್ದಾರೆ.
ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಜನರು ತಮ್ಮ ಊರುಗಳಿಗೆ ತೆರಳುತ್ತಿದ್ದು ಹಾಗೂ KSRTC ವತಿಯಿಂದ ಹೆಚ್ಚುವರಿಯಾಗಿ ಬಸ್ ಬಿಟ್ಟಿರುವ ಹಿನ್ನೆಲೆ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆಯಾಗುವ ಕಾರಣ ಸಾರ್ವಜನಿಕರು ಬದಲಿ ರಸ್ತೆ ಮೂಲಕ ಸಂಚರಿಸುವಂತೆ ಉಪ್ಪಾರಪೇಟೆ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಅದೇ ರೀತಿಯಾಗಿ ವರ್ತೂರು ಗುಂಜೂರು ರಸ್ತೆಯಲ್ಲಿ ಹಬ್ಬ ಹಿನ್ನಲೆ ಶಾಪಿಂಗ್‌ನಿಂದಾಗಿ ನಿಧಾನಗತಿಯ ಸಂಚಾರವಿದ್ದು, ದಯಮಾಡಿ ಸಹಕರಿಸುವಂತೆ ತಿಳಿಸಲಾಗಿದೆ.
ರಾತ್ರಿಯಾಗುತ್ತಿದ್ದಂತೆ ಕೆಎಸ್ಆರ್ಟಿಸಿಯತ್ತ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿದೆ. ತಮ್ಮ ತಮ್ಮ ಊರುಗಳಿಗೆ ಹೋಗಲು ಸಾವಿರಾರು ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಟರ್ಮಿನಲ್-1ರಲ್ಲಿ ಜನಜಂಗುಳಿ ಉಂಟಾಗಿದೆ.