Sunday, October 1, 2023

Latest Posts

ಗಣೇಶೋತ್ಸವ ಐಕ್ಯತೆಯ ಪ್ರತೀಕ: ಸಂಸದ ಕರಡಿ ಸಂಗಣ್ಣ

ಹೊಸದಿಗಂತ ವರದಿ ಕೊಪ್ಪಳ:

ಗಣೇಶೋತ್ಸವ ಐಕ್ಯತೆಯ ಪ್ರತೀಕ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು. ನಗರದಲ್ಲಿ ಹಿಂದೂ ಮಹಾ ಮಂಡಳಿ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಆಚರಿಸುವ ಗಣೇಶೋತ್ಸವಕ್ಕೆ ಭಾನುವಾರ ಹಾಲಕಂಬ ಪೂಜೆಯಲ್ಲಿ ಭಾಗವಹಿಸಿ ಮಾತನಾಡಿದರು.

ʻಭಕ್ತಿ ಹಾಗೂ ಭಾವೈಕ್ಯತೆಯ ಹಿನ್ನೆಲೆಯಲ್ಲಿ ಬಾಲಗಂಗಾಧರ ತಿಲಕರ ಮುಂದಾಳತ್ವದಲ್ಲಿ ಹುಟ್ಟಿ ಬೆಳೆದ ಗಣೇಶ ಹಬ್ಬವು ಇಂದು ನಮ್ಮೆಲ್ಲರ ಅಚ್ಚುಮೆಚ್ಚಿನ ಹಬ್ಬವಾಗಿದೆ. ಚದುರಿ ಹೋಗಿದ್ದ ಅಂದಿನ ಅನಕ್ಷರಸ್ಥ ಸಮಾಜದಲ್ಲಿ ಸ್ವಾತಂತ್ರ್ಯ ಹೋರಾಟಕ್ಕಾಗಿ ಜನರನ್ನು ಒಂದೇ ವೇದಿಕೆಯಡಿ ಏಕೀಕರಣಗೊಳಿಸಲು ತಿಲಕರು ಆಯ್ಕೆ ಮಾಡಿದ್ದೇ ಈ ಗಣೇಶ ಹಬ್ಬʼ ಎಂದರು.

ತಿಲಕರ ಕರೆಗೆ ಜಾತಿ-ಮತ ಬೇಧವಿಲ್ಲದೆ ಬಹುಬೇಗನೆ ಸ್ಪಂದಿಸಿದರು. ದೇಶಾದ್ಯಂತ ಭಕ್ತಿಯ ಪ್ರವಾಹ ಹರಿಯುವುದರೊಂದಿಗೆ ಬ್ರಿಟಿಷರಿಗೆ ನಮ್ಮ ಏಕತೆಯ ಬಿಸಿಯನ್ನೂ ಮುಟ್ಟಿಸಿತು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!