ನಿರ್ಬಂಧ ರಹಿತ ಗಣೇಶೋತ್ಸವ: ವಿಘ್ನ ನಿವಾರಕನ ಹಬ್ಬಕ್ಕೆ ಎಲ್ಲಾ ವಿಘ್ನಗಳೂ ದೂರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಕಳೆದ ಎರಡು ವರ್ಷಗಳಿಂದ ಗಣೇಶೋತ್ಸವಕ್ಕೆ ಕವಿದಿದ್ದ ಕೋವಿಡ್ ಕರಿಛಾಯೆ ಈ ಬಾರಿ ದೂರವಾಗಿದ್ದು, ಎಲ್ಲಾ ನಿರ್ಬಂಧ ತೆರವುಗೊಳಿಸಿ ಅದ್ದೂರಿಯ ಆಚರಣೆಗೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.

ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಹಿಂದಿನಂತೆಯೇ ಗಣೇಶನ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಈ ಬಾರಿ ಅವಕಾಶವಿದೆ ಎಂದರು.

ಪರಿಸರ ಸ್ನೇಹಿ ಮಣ್ಣಿನಿಂದ ತಯಾರಿಸಿದ ಗಣಪತಿ ವಿಗ್ರಹಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು, ಪರಿಸರ ಮಾಲಿನ್ಯಗೊಳಿಸುವ ಪ್ಲಾಸ್ಲರ್ ಆಫ್​ ಪ್ಯಾರಿಸ್ ಇನ್ನಿತರ ವಸ್ತು ಬಳಸಿ ತಯಾರಿಸಿದ ವಿಗ್ರಹ ಕೂಡಿಸುವಂತಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಹಬ್ಬದ ಸಂಭ್ರಮವನ್ನು ಹಳೆಯ ವೈಭವಕ್ಕೆ ಮರಳಿಸುವ ದೃಷ್ಟಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ‌ ಎಂದು ಅವರು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!