ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ರೌಡಿಗಳ ಹಾಡಹಗಲೇ ವ್ಯಕ್ತಿಯೊಬ್ಬನ ಮೇಲೆ ಭೀಕರ ಹಲ್ಲೆ ನಡೆಸಿದ ಘಟನೆ ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
68 ಬಾರಿ ಮಚ್ಚಿನಿಂದ ಹೊಡೆದು ಮನಸೋ ಇಚ್ಚೆ ಥಳಿಸಿದ್ದಾರೆ. ಬಳಿಕ ಕುಣಿದು ಕುಪ್ಪಳಿಸಿದ್ದಾರೆ. 68 ಬಾರಿ ಮಚ್ಚೇಟು ಬಿದ್ರು ಅದೃಷ್ಟವಶಾತ್ ಸಂತೋಷ್ ಜೀವ ಉಳಿದಿದೆ. ಮಚ್ಚಿನಿಂದ ಚುಚ್ಚಿದ ದುಷ್ಕರ್ಮಿಗಳು ಬಳಿಕ ಡ್ಯಾನ್ಸ್ ಮಾಡಿ ವಿಕೃತಿ ಮೆರೆದಿದ್ದಾರೆ. ಶರತ್ ಆ್ಯಂಡ್ ಗ್ಯಾಂಗ್ ನಿಂದ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.
ಅಣ್ಣನ ಕೊಲೆಯ ಪ್ರತೀಕಾರಕ್ಕೆ ಮಾರಕಾಸ್ತ್ರದಿಂದ ಅಗ್ರಹಾರ ದಾಸರಹಳ್ಳಿ ನಿವಾಸಿ ಸಂತೋಷ್ ಮೇಲೆ ಶರತ್ ಅಂಡ್ ಗ್ಯಾಂಗ್ ಅಟ್ಯಾಕ್ ಮಾಡಿ ಕೊಲೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. 2024ರಲ್ಲಿ ಸಂತೋಷ್ನಿಂದ ಮೋಹನ್ ಎಂಬಾತನ ಕೊಲೆ ನಡೆದಿತ್ತು. ಕಾರಿನ ವಿಚಾರಕ್ಕೆ ಇಬ್ಬರ ನಡುವೆ ಬೆಂಗಳೂರಿನಲ್ಲಿ ಗಲಾಟೆ ನಡೆದಿದೆ. ಈ ವೇಳೆ ಮಂಡ್ಯದಲ್ಲಿ ಕುಡಿದು ಕೊಳ್ಳೇಗಾಲಕ್ಕೆ ಹೋಗಿ ಗಲಾಟೆ ಮಾಡಿದ್ದ ಸಂತೋಷ್ ಮೋಹನ್ ಗೆ ಕಾಲಿಂದ ಒದ್ದು ಕೊಲೆ ಮಾಡಿದ್ದನಂತೆ. ಬಳಿಕ ಕೊಳ್ಳೆಗಾಲದ ಕೆರೆಯಲ್ಲಿ ಮೃತದೇಹವನ್ನು ಬಿಸಾಡಿ ಹೋಗಿದ್ದ ಎನ್ನಲಾಗುತ್ತಿದೆ.



