ಬಾಗಲಕೋಟೆಯಲ್ಲಿ ಗುಂಪು ಘರ್ಷಣೆ: 18 ಜನರ ಬಂಧನ 

ಬಾಗಲಕೋಟೆ (ಕೆರೂರ), ಹೊಸದಿಗಂತ ವರದಿ :

ಪಟ್ಟಣದಲ್ಲಿ ಬುಧವಾರ ನಡೆದ ಗುಂಪು ಘರ್ಷಣೆ ಹಿನ್ನಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತು. ಘಟನೆ ಭಾಗಿಯಾದ ಎರಡು ಕೋಮಿನ ೧೮ ಜನರನ್ನು ಪೊಲೀಸರು ಬಂಧಿಸಿದ್ದಾರೆ. ಶಾಂತಿ ಕಾಪಾಡಲು ಎರಡು ದಿನಗಳ ಕಲಂ 144 ಸೆಕ್ಷನ್ ಜಾರಿ ಮಾಡಿ ನಿಷೇಧ ಹೇರಲಾಗಿತ್ತು. ಪಟ್ಟಣದ ತುಂಬ ಪೊಲೀಸರ ಸರ್ಪಗಾವಲು ಹಾಕಲಾಗಿದ್ದು ಜನರು ಹೊರಬರದೆ ಕೆರೂರ ಪಟ್ಟಣ ಸಂಪೂರ್ಣ ಸ್ತಬ್ಧವಾಗಿ ಮಾರುಕಟ್ಟೆ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಬೆಳಗಾವಿ ಉತ್ತರ ವಲಯ ಐಜಿಪಿ ಭೇಟಿ

ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಇದೇ ಸಂದರ್ಭದಲ್ಲಿ ಯಾವುದೇ ವದಂತಿಗಳಿಗೆ ಕಿವಿಗೊಡದೇ ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.ಬೆಳಗಾವಿ ಉತ್ತರ ವಲಯ ಐಜಿಪಿ ಎನ್ ಸತೀಶ್ ಭೇಟಿನೀಡಿ ಎಸ್ಪಿ ಬಳಿ ಘಟನಾ ಮಾಹಿತಿ ಪಡೆದರು. ಈ ಸಮಯದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ, ಉಪ ವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಶೀಲ್ದಾರ ಜಿ.ಬಿ.ಮಜ್ಜಗಿ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಎನ್.ಕೆಂಚಪ್ಪ ಹಾಜರಿದ್ದರು.

ಶಾಂತಿ ಕಾಪಾಡುವಂತೆ ಸಿದ್ದು ಮನವಿ
ಅಹಿತಕರ ಘಟನೆ ಹಿನ್ನೆಲೆಯಲ್ಲಿ ಬಾದಾಮಿ ವಿಧಾನಸಭೆ ಕ್ಷೇತ್ರದ ಕೆರೂರಿನಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದ್ದು ಶಾಂತಿ ಕಾಪಾಡುವಂತೆ ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.
ಕೆಲ ವಿಚ್ಛಿದ್ರಕಾರಿ ಶಕ್ತಿಗಳು ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ನಡೆಸಿವೆ.
ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಸೌಹಾರ್ದತೆ ಕಾಪಾಡಬೇಕು.
ಘಟನೆ ಸಂಬಂಧ ಜಿಲ್ಲಾ ಎಸ್ಪಿ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು ಅಹಿತಕರ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಪಪಂ ಅಧ್ಯಕ್ಷರ ಮನವಿ
ಪಟ್ಟಣದಲ್ಲಿ ನಡೆದ ಘರ್ಷಣೆಯಿಂದ ಯಾರು ಉದ್ವೇಗಕ್ಕೆ ಒಳಗಾಗದೆ ಶಾಂತಿ ಕಾಪಾಡಬೇಕು.ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಗುರು ಹಿರಿಯರು ಜನರಿಗೆ ತಿಳಿಹೇಳಿ ಪಟ್ಟಣದಲ್ಲಿ ಶಾಂತಿ ಕಾಪಾಡುವಂತೆ ಸಹಕರಿಸಬೇಕು ಎಂದು ಪಪಂ ಅಧ್ಯಕ್ಷೆ ಮಂಜುಳಾ ತಿಮ್ಮಾಪುರ ನಾಗರಿಕರಲ್ಲಿ ಮನವಿ ಮಾಡಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!