ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯ ಮೇಲೆ ಗುಂಪೊಂದು ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಘಟನೆ ದೆಹಲಿ ರೈಲ್ವೆ ನಿಲ್ದಾಣದಲ್ಲಿ ನಡೆದಿದ್ದು, ಕಾಮುಕರನ್ನು ಘಟನೆ ನಡೆದ ಎರಡೇ ಗಂಟೆಯಲ್ಲಿ ಪೊಲೀಸರು ಕಂಬಿ ಹಿಂದೆ ನಿಲ್ಲಿಸಿದ್ದಾರೆ.
ಬಂಧಿತರನ್ನು ಸತೀಶ್ ಕುಮಾರ್ (35), ವಿನೋದ್ ಕುಮಾರ್ (38), ಮಂಗಲ್ ಚಂದ್ ಮೀನಾ (33) ಮತ್ತು ಜಗದೀಶ್ ಚಂದ್ (37) ಎಂದು ಗುರುತಿಸಲಾಗಿದೆ. ಮಧ್ಯರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ರೈಲ್ವೆ ನಿಲ್ದಾಣದೊಳಗಿನ ಎಲೆಕ್ಟ್ರಿಕಲ್ ನಿರ್ವಹಣಾ ಸಿಬ್ಬಂದಿ ಕೊಠಡಿಯಲ್ಲಿ ಇಬ್ಬರು ರೈಲ್ವೆ ಉದ್ಯೋಗಿಗಳು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದರೆ, ಇನ್ನಿಬ್ಬರು ಕೊಠಡಿಯ ಹೊರಗಿನಿಂದ ಕಾವಲು ಕಾದು ಕೃತ್ಯಕ್ಕೆ ಸಾಥ್ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.