ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯೋರ್ವರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ನಡೆಸಿದ ನಾಲ್ವರು ಹೋಟೆಲ್ ಉದ್ಯೋಗಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ನಾಲ್ವರು ಆರೋಪಿಗಳಲ್ಲಿ ಮೂವರು ಪಶ್ಚಿಮ ಬಂಗಾಳದವರು ಮತ್ತು ಒಬ್ಬ ಉತ್ತರಾಖಂಡದವನಾಗಿದ್ದು, ಅವರು ಹೋಟೆಲ್‌ಗಳಲ್ಲಿ ಅಡುಗೆಯವರು ಮತ್ತು ಸಹಾಯಕರಾಗಿ ಕೆಲಸ ಮಾಡುತ್ತಿದ್ದರು ಎಂದು ಬೆಂಗಳೂರು ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಸಾರಾ ಫಾತಿಮಾ ಹೇಳಿದ್ದಾರೆ.
ಆರೋಪಿಗಳು ರೆಸ್ಟೋರೆಂಟ್‌ನಲ್ಲಿ ಮಹಿಳೆಯ ಜೊತೆ ಸ್ನೇಹ ಬೆಳೆಸಿ, ಆಕೆಯೊಂದಿಗೆ ಊಟ ಮಾಡಿ, ನಂತರ ಹೋಟೆಲ್‌ನ ಛಾವಣಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಆಕೆಯ ಅರೋಗ್ಯ ಸ್ಥಿರವಾಗಿದೆ. ಆಕೆ ತನ್ನ ಪತಿಗೆ ತನ್ನ ಮೇಲೆ ನಡೆದ ದೌರ್ಜನ್ಯದ ಬಗ್ಗೆ ವಿವರಿಸಿದ ನಂತರ ಈ ಘಟನೆ ಬೆಳಕಿಗೆ ಬಂದಿದ್ದು, ಸಂತ್ರಸ್ತೆಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು ನಾಲ್ವರನ್ನು ಬಂಧಿಸಿ ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.