ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆಂಡತಿಯ ಕುಟುಂಬವು ವರದಕ್ಷಿಣೆ ಬೇಡಿಕೆಯನ್ನು ಪೂರೈಸಿಲ್ಲ ಎಂದು ಮಹಿಳೆಯ ಮೇಲೆ ಆಕೆಯ ಪತಿಯೇ ತನ್ನ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ನಡೆದಿದೆ. ಕಾನ್ಪುರದ ಚಕೇರಿ ಪ್ರದೇಶದಲ್ಲಿ ಈ ಘಟನೆ ನಡೆದಿರುವ ಕುರಿತು ಮೂಲಗಳು ವರದಿ ಮಾಡಿವೆ.
ಚಕೇರಿ ಪೋಲೀಸ್ ಠಾಣೆಯಲ್ಲಿ ಕಿರುಕುಳ ಮತ್ತು ಅತ್ಯಾಚಾರ ನಡೆದಿರುವ ಕುರಿತು ಮಹಿಳೆಯ ಕುಟುಂಬವು ದೂರು ದಾಖಲಿಸಿದ್ದು ಆಕೆಯ ಪತಿ ಮತ್ತು ಆತನ ಸ್ನೇಹಿತರ ಮೇಲೆ ಆರೋಪಿಸಲಾಗಿದೆ .2020 ರ ಮಾರ್ಚ್ 6 ರಂದು ಮದುವೆಯಾಗಿದ್ದು, ಅಂದಿನಿಂದ ಪತಿ 2 ಲಕ್ಷ ರೂಪಾಯಿ ಮತ್ತು ಕಾರಿಗೆ ಬೇಡಿಕೆಯಿಟ್ಟಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಅವರ ಬೇಡಿಕೆಗಳು ಈಡೇರದಿದ್ದಾಗ ಆಕೆಯನ್ನು ಕೊಠಡಿಯೊಂದರಲ್ಲಿ ಕೂಡಿ ಹಾಕಲಾಯಿತು, ಇದಲ್ಲದೆ ತನ್ನ ಪತಿ ಒಂದು ದಿನ ತನ್ನ ಮೂವರು ಸ್ನೇಹಿತರನ್ನು ಕರೆತಂದರು ಮತ್ತು ಅವರು ನಾಲ್ವರೂ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದರು, ಪ್ರತಿಭಟಿಸಿದಾಗ ಪತಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಎಂದು ಮಹಿಳೆ ದೂರಿನಲ್ಲಿ ಹೇಳಿದ್ದಾರೆ.
ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆಯ ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಮೃಗಾಂಕ್ ಪಾಠಕ್ ತಿಳಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.