ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಪರಿಚಯಸ್ಥರಿಂದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಶಂಕಿತರನ್ನು ಶಂಕಿ, ರಾಬಿನ್ ಮತ್ತು ಅಂಕಿತ್ ಎಂದು ಗುರುತಿಸಲಾಗಿದೆ. ಆರೋಪಿಗಳು 24 ವರ್ಷದ ಯುವತಿಯನ್ನು ತಮ್ಮ ಕಾರಿನಲ್ಲಿ ಕರೆದೊಯ್ದು ಕೊಳವೆ ಬಾವಿ ಕಾಂಪೌಂಡ್ ಬಳಿ ಅತ್ಯಾಚಾರ ಎಸಗಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ವಾಜಪೇಯಿ ತಿಳಿಸಿದ್ದಾರೆ.
ಈ ದೂರಿನಲ್ಲಿ ಸಂತ್ರಸ್ತೆ ಪೊಲೀಸರಿಗೆ ಆರೋಪಿಯ ಪರಿಚಯವಿದೆ ಎಂದು ಹೇಳಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಡಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ವಾಜಪೇಯಿ ತಿಳಿಸಿದ್ದಾರೆ. ಆರೋಪಿಗಳನ್ನು ಬಂಧಿಸಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.