ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಕ್ಷೇತ್ರ ವಾರಣಾಸಿಗೆ ಆಗಮಿಸಿದ್ದು, ಮೂರು ದಿನಗಳ ಹಿಂದೆ 19 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಾಹಿತಿ ಪಡೆದಿದ್ದಾರೆ.
ವಾರಾಣಸಿಗೆ ಪ್ರಧಾನಿ ಬರುತ್ತಿದಂತೆ ಪೊಲೀಸ್ ಆಯುಕ್ತರು, ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ನಗರದಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಘಟನೆಯ ಬಗ್ಗೆ ವಿವರಿಸಿದ್ದಾರೆ.
ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.