Friday, June 2, 2023

Latest Posts

ಅಪಹರಣ ಪ್ರಕರಣ: ಗ್ಯಾಂಗ್‌ಸ್ಟರ್‌ ಅತೀಕ್ ಅಹ್ಮದ್ ದೋಷಿ ಎಂದು ತೀರ್ಪು ಪ್ರಕಟಿಸಿದ ಯುಪಿ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

2006ರ ಉಮೇಶ್‌ ಪಾಲ್‌ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಗ್ಯಾಂಗ್​​ಸ್ಟರ್ ಅತೀಕ್‌ ಅಹ್ಮದ್‌ ದೋಷಿ ಎಂದು ಪ್ರಯಾಗರಾಜ್‌ ನ್ಯಾಯಾಲಯವು ತೀರ್ಪು ನೀಡಿದೆ.

ಅತೀಕ್‌ ಅಹ್ಮದ್ ಆತನ ಸಹೋದರರು ಮತ್ತು ಇತರ 8 ಜನರು ದೋಷಿಗಳೆಂದು ನ್ಯಾಯಾಲಯವು ಹೇಳಿದೆ.

ಈ ಮುಂಚೆ ಉತ್ತರ ಪ್ರದೇಶ ಪೊಲೀಸ್ ಕಸ್ಟಡಿಯಲ್ಲಿ ರಕ್ಷಣೆ ನೀಡುವಂತೆ ಅತೀಕ್ ಅಹ್ಮದ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿತ್ತು. ಕೊಲೆ ಮತ್ತು ಅಪಹರಣ ಸೇರಿದಂತೆ ಕನಿಷ್ಠ 100 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಮಾಜಿ ಸಂಸದ ಮತ್ತು ಶಾಸಕ ಅತೀಕ್ ಅಹ್ಮದ್ ಅನ್ನು ಸೋಮವಾರ ಉತ್ತರ ಪ್ರದೇಶ ಪೊಲೀಸರು 24 ಗಂಟೆಗಳ ರಸ್ತೆ ಪ್ರಯಾಣದ ನಂತರ ಗುಜರಾತ್ ಜೈಲಿನಿಂದ ಪ್ರಯಾಗ್‌ರಾಜ್‌ಗೆ ಕರೆತಂದಿದ್ದರು.

2006ರ ಅಪಹರಣ ಪ್ರಕರಣದ ಕುರಿತು ಇಂದು ಪ್ರಯಾಗರಾಜ್ ನ್ಯಾಯಾಲಯವು ತೀರ್ಪು ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!