ಹೊಸದಿಗಂತ ಡಿಜಿಟಲ್ ಡೆಸ್ಕ್
ಗಾಯಕ-ರಾಜಕಾರಣಿ ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್- ಕೆನಡಾ ಮೂಲದ ದರೋಡೆಕೋರ ಗೋಲ್ಡಿ ಬ್ರಾರ್ ನನ್ನು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ ಖಚಿತಪಡಿಸಿದ್ದಾರೆ.
“ಇಂದು ಬೆಳಿಗ್ಗೆ ಖಚಿತವಾದ ಸುದ್ದಿ ಇದೆ. ಕೆನಡಾದಲ್ಲಿ ಅಡಗಿದ್ದ ದೊಡ್ಡ ದರೋಡೆಕೋರ ಗೋಲ್ಡಿ ಬ್ರಾರ್ ನನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ” ಎಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾನ್ ಹೇಳಿದರು.
“ಪಂಜಾಬ್‌ನಲ್ಲಿ ಈ ದರೋಡೆಕೋರ ಸಂಸ್ಕೃತಿ ಶೀಘ್ರದಲ್ಲೇ ಕೊನೆಗೊಳ್ಳುತ್ತದೆ. ಅವರು (ದೇಶ) ಹೊರಗೆ ಅವಿತಿದ್ದಾರೆ. ಅವರು ಎಲಿದ್ದರೂ ನಾವು ಬಿಡುವುದಿಲ್ಲ. ಇತ್ತೀಚೆಗೆ ನಾವು ಗೃಹ ಸಚಿವಾಲಯದ ಮೂಲಕ ಗೋಲಿ ಬ್ರಾರ್ ವಿರುದ್ಧ ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದ್ದೇವೆ. ಆತನನ್ನು ಬಂಧಿಸಲಾಗಿದ್ದು, ಶೀಘ್ರದಲ್ಲೇ ಭಾರತಕ್ಕೆ ಹಸ್ತಾಂತರಿಸಲಾಗುವುದು ಎಂದು ತಿಳಿದು ಬಂದಿದೆ. ಆತ ದೊಡ್ಡ ಕೊಲೆ ಪ್ರಕರಣಗಳ ಆರೋಪಿಯಾಗಿದ್ದಾನೆ ಮತ್ತು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಅವರು ಹೇಳಿದರು.
ಜೂನ್‌ನಲ್ಲಿ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಗೋಲ್ಡಿ ಬ್ರಾರ್ ವಿರುದ್ಧ ಇಂಟರ್‌ಪೋಲ್ ರೆಡ್-ಕಾರ್ನರ್ ನೋಟಿಸ್ ಜಾರಿಗೊಳಿಸಿತು. ಪಂಜಾಬ್ ಪೊಲೀಸರು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಸಿಬಿಐ) ಮೂಲಕ ಇಂಟರ್‌ಪೋಲ್‌ಗೆ ವಿನಂತಿ ಕಳುಹಿಸಲಾಗಿತ್ತು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ