Monday, November 3, 2025

ಟಿಪ್ಪು ಅರಮನೆ ಮೇಲೆ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್ ಹೆಸರು: ಕಿಡಿಗೇಡಿಗಳ ವಿರುದ್ಧ ಕೇಸ್ ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದ ಪ್ರಸಿದ್ದ ಟಿಪ್ಪು ಬೇಸಿಗೆ ಅರಮನೆ ಮೇಲೆ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಹೆಸರು ಬರೆದು ವಿಕೃತಿ ಮೆರೆದಿದ್ದಾರೆ.

ಸದಾ ಪ್ರವಾಸಿಗರಿಂದ ತುಂಬಿರುವ ಗಿರಿಧಾಮದ ಟಿಪ್ಪು ಬೇಸಿಗೆ ಅರಮನೆಯ ಮೇಲೆ ಈ ಬರಹ ಬರೆಯಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

ಅರಮನೆ ಮೇಲೆ ಇಂಗ್ಲಿಷ್‌ನಲ್ಲಿ ಲಾರೆನ್ಸ್ ಬಿಷ್ಣೋಯ್ ಹೆಸರು ಬರೆದಿದ್ದು, ಹೆಸರಿನ ನಡುವೆ ಪ್ರೀತಿಯ ಸಂಕೇತವನ್ನೂ ಬರೆಯಲಾಗಿದೆ. ನಂದಿಗಿರಿಧಾಮ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಈ ಬರಹದ ಮೇಲೆ ಬಣ್ಣ ಬಳಿದಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ನಂದಿಗಿರಿ ಧಾಮ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. PDLP, BNS ಸೆಕ್ಷನ್ 324 (2), 329 (3)ರ ಅಡಿ ದುಷ್ಕರ್ಮಿಗಳ ಮೇಲೆ ಕೇಸ್ ದಾಖಲಾಗಿದೆ.

ಟಿಪ್ಪು ಬೇಸಿಗೆ ಅರಮನೆಯು ಪುರಾತತ್ವ ಇಲಾಖೆಗೆ ಸೇರಿದೆ. ಇಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದರೂ ಅವು ಸರಿಯಾಗಿ ಕಾರ್ಯ ನಿರ್ವಹಿಸಲ್ಲ ಎನ್ನಲಾಗಿದ್ದು, ಇದರಿಂದ ಇಲ್ಲಿನ ಪ್ರಾಚೀನ ಸ್ಮಾರಕಗಳು, ಕಟ್ಟಡಗಳ ಭದ್ರತೆ ಕುರಿತು ಪ್ರಶ್ನೆ ಉದ್ಭವಿಸಿದೆ.

error: Content is protected !!