ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳೆಗಿಳಿಸಿದ ವಿಚಾರ ಸುದ್ದಿಗೋಷ್ಠಿಯಲ್ಲಿ ನಿನ್ನೆ ಕೊಹ್ಲಿ ಹಲವು ವಿಚಾರಗಳನ್ನು ಹೇಳಿದ್ದು, ಈ ಕುರಿತು ಬಿಸಿಸಿಐ ಅಧ್ಯಕ್ಷ ಮಂಡಳಿ ಇದನ್ನು ಸರಿಯಾದ ರೀತಿ ಡೀಲ್ ಮಾಡಿಕೊಳ್ಳುತ್ತದೆ ಎಂದು ಹೇಳಿದೆ.
ಕೊಹ್ಲಿ ಸುದ್ದಿಗೋಷ್ಠಿ ಬಗ್ಗೆ ಪ್ರತಿಕ್ರಿಯಿಸಿದ ಗಂಗೂಲಿ, ಇದನ್ನು ಎಳೆದುಕೊಂಡು ಹೋಗುವುದಕ್ಕೆ ಇಷ್ಟಪಡದೇ, ಇದರ ಬಗ್ಗೆ ನಾನೇನು ಹೇಳುವುದಿಲ್ಲ. ಬಿಸಿಸಿಐ ಆಡಳಿತ ಮಂಡಳಿ ಇದನ್ನು ಸೂಕ್ತ ರೀತಿಯಲ್ಲಿ ಬಗೆಹರಿಸಲಿದೆ ಎಂದು ಹೇಳಿದ್ದಾರೆ.
ಕಳೆದ ವಾರ ಕೊಹ್ಲಿಯನ್ನು ಏಕದಿನ ನಾಯಕತ್ವದಿಂದ ಕೆಳಗಿಳಿಸಿ ರೋಹಿತ್ ಶರ್ಮಾ ಅವರನ್ನು ನಾಯಕನನ್ನಾಗಿ ನೇಮಿಸಲಾಗಿತ್ತು. .