ನಾಳೆ ಗಂಗೂಲಿ- ಅಮಿತ್ ಶಾ ಭೇಟಿ: ರಾಜಕೀಯಕ್ಕೆ ದಾದಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಶ್ಚಿಮ ಬಂಗಾಳದ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಶುಕ್ರವಾರ ಬಿಸಿಸಿಐ ಅಧ್ಯಕ್ಷ ಮತ್ತು ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ನಿವಾಸಕ್ಕೆ ಭೇಟಿ ನೀಡಿ, ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ.
ಗಂಗೂಲಿ ನಿವಾಸಕ್ಕೆ ತೆರಳುವ ಅಮಿತ್ ಶಾ ಅವರಿಗೆ ಬಿಜೆಪಿಯ ರಾಜ್ಯಸಭಾ ಸದಸ್ಯ ಸ್ವಪನ್ ದಾಸ್‌ಗುಪ್ತಾ ಮತ್ತು ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸಾಥ್​ ನೀಡಲಿದ್ದಾರೆ. ಗಂಗೂಲಿ ನಿವಾಸದಲ್ಲೇ ಅವರು ಭೋಜನ ಸೇವಿಸುವ ನಿರೀಕ್ಷೆ ಇದೆ ಎಂದು ಬಿಜೆಪಿ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ.
2021ರ ವಿಧಾನಸಭಾ ಚುನಾವಣೆಗೂ ಮುನ್ನ ಗಂಗೂಲಿ ಬಿಜೆಪಿ ಸೇರಬಹುದು ಎಂಬ ವದಂತಿ ಹರಿದಾಡಿತ್ತು. ಅಲ್ಲದೇ, ಈ ಸಮಯದಲ್ಲಿ ಅಮಿತ್​ ಶಾ ಕೋಲ್ಕತ್ತಾಕ್ಕೆ ತೆರಳಿದಾಗ ಗಂಗೂಲಿ ಅವರನ್ನು ಭೇಟಿಯಾಗುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಆದರೆ, ಆಗ ಗಂಗೂಲಿ ಆಸ್ಪತ್ರೆಗೆ ದಾಖಲಾಗಿದ್ದರಿಂದ ಅಂದು ಶಾ ಭೇಟಿ ಸಾಧ್ಯವಾಗಿರಲಿಲ್ಲ. ಹೀಗಾಗಿ ಇದು ಕುತೂಹಲಕ್ಕೆ ಕಾರಣವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!