Wednesday, August 10, 2022

Latest Posts

ಗಣಿನಾಡಲ್ಲಿ ಮುಂದುವರಿದ ಕೊರೋನಾ ಅಟ್ಟಹಾಸ: 1558 ಜನರಿಗೆ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸ ದಿಗಂತ ವರದಿ, ಬಳ್ಳಾರಿ:

ಗಣಿನಾಡು ಬಳ್ಳಾರಿ ಹಾಗೂ ನೂತನ ವಿಜಯನಗರ ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ, ಪ್ರತಾಪ ಮುಂದುವರೆದಿದ್ದು, ಮಂಗಳವಾರ 744 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 1558 ಜನರಿಗೆ ಸೊಂಕು ಇರುವುದು ದೃಢಪಟ್ಟಿದೆ. ಇದರ ಜೊತೆಗೆ 28 ಜನರು ಸೊಂಕಿಗೆ ಬಲಿಯಾಗಿದ್ದು, ನಾಗರಿಕರನ್ನು ಬೆಚ್ಚಿ‌ ಬೀಳಿಸಿದೆ. ಇಲ್ಲಿವರೆಗೆ ಜಿಲ್ಲೆಯಲ್ಲಿ 64,946 ಜನರಿಗೆ ಸೊಂಕು ಇರುವುದು ದೃಢಪಟ್ಟಿದ್ದು, ಅದರಲ್ಲಿ 48,351 ಜನರು ಗುಣಮುಖರಾಗಿ ಆಸ್ಪತ್ರೆಯಿಂದ‌ಬಿಡುಗಡೆ ಹೊಂದಿದ್ದಾರೆ. 15,633 ಸಕ್ರೀಯ ಪ್ರಕರಣಗಳಿದ್ದು, ಇಲ್ಲಿವರೆಗೆ 962ಜನರು ಉಭಯ ಜಿಲ್ಲೆಯಲ್ಲಿ ಬಲಿಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss