ಹೊಸದಿಗಂತ ವರದಿ,ವಿಜಯಪುರ:
ಕಬ್ಬು ಹಾಗೂ ಮೆಕ್ಕೆಜೋಳ ಬೆಳೆಗಳ ಮಧ್ಯೆ ಅಕ್ರಮ ಗಾಂಜಾ ಬೆಳೆದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ, 79,80,000 ರೂ.ಗಳ ಮೌಲ್ಯದ ಒಟ್ಟು 228 ಕೆಜಿ ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ಯತ್ನಾಳ್ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಮಲ್ಲು ಗೋವಿಂದ ಕರ್ವೆ (60), ಮನಿಗೇನಿ ಗೋವಿಂದ ಕರ್ವೆ (63) ಬಂಧಿತ ಆರೋಪಿಗಳು.
ಈ ಆರೋಪಿಗಳು ಯತ್ನಾಳ್ ಗ್ರಾಮದ ತಮ್ಮ 1.37 ಎಕರೆ ಜಮೀನಿನ ಕಬ್ಬು, ಮೆಕ್ಕೆಜೋಳ ಬೆಳೆಗಳ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಆಧರಿಸಿ ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿಗಳಾದ ಶಂಕರ ಮಾರಿಹಾಳ, ರಾಮನಗೌಡ ಹಟ್ಟಿ ಮಾರ್ಗದರ್ಶನದಲ್ಲಿ ಸಿಇಎನ್ ಅಪರಾಧ ಪೊಲೀಸ್ ಠಾಣೆ ಡಿಎಸ್‌ಪಿ ಸುನೀಲ ಕಾಂಬಳೆ, ಸಿಪಿಐ ರಮೇಶ ಅವಜಿ, ಪಿಎಸ್‌ಐ ಮಲ್ಲಿಕಾರ್ಜುನ ತಳವಾರ ಸೇರಿದಂತೆ ಸಿಬ್ಬಂದಿ ತಂಡ ಆರೋಪಿಗಳನ್ನು ಬಂಧಿಸಿ, 79,80,000 ರೂ.ಗಳ ಮೌಲ್ಯದ ಒಟ್ಟು 228 ಕೆಜಿ ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ.
ಈ ಸಂಬಂಧ ನಗರದ ಸಿಇಎನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.