ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೂರು ಪ್ರತ್ಯೇಕ ಘಟನೆಗಳಲ್ಲಿ ಬ್ಯಾಂಕಾಂಕ್ ನಿಂದ ಪ್ರಯಾಣಿಸುತ್ತಿದ್ದವರಿಂದ ಕಸ್ಟಮ್ಸ್ ಅಧಿಕಾರಿಗಳು ಸುಮಾರು 1.25 ಕೋಟಿ ಮೌಲ್ಯದ ಸುಮಾರು 12.5 ಕೆಜಿ ಗಾಂಜಾವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.
ಮೂವರು ಕೂಡ ಪುರುಷ ಪ್ರಯಾಣಿಕರಾಗಿದ್ದ ಎಲ್ಲರೂ ಭಾರತೀಯರಾಗಿದ್ದಾರೆ. ಎರಡು ಇಂಡಿಗೋ ವಿಮಾನಗಳು ಮತ್ತು ಥಾಯ್ ಏರ್ ವಿಮಾನದ ಮೂಲಕ ಬಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೂರೂ ಪ್ರಕರಣಗಳಲ್ಲಿ ಕಾರ್ಯಾಚರಣೆಯ ವಿಧಾನ ಒಂದೇ ಆಗಿತ್ತು. ಗಾಂಜಾ ಉಂಡೆಗಳನ್ನು ಚಿಪ್ಸ್ ಪ್ಯಾಕೆಟ್‌ಗಳಲ್ಲಿ ಮರೆಮಾಚಿದ್ದರು. ಪ್ರಯಾಣಿಕರ ವಿವರಗಳ ಆಧಾರದ ಮೇಲೆ, ಕಸ್ಟಮ್ಸ್ ಅಧಿಕಾರಿಗಳು ಅವರನ್ನು ವಶಕ್ಕೆ ತೆಗೆದುಕೊಂಡು ವ್ಯಾಪಕ ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ರಾತ್ರಿ ಬಂದ ಮೊದಲ ವಿಮಾನದಲ್ಲಿದ್ದ ಪ್ರಯಾಣಿಕರಿಂದ 4 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮತ್ತೊಬ್ಬ ಪ್ರಯಾಣಿಕನಿಂದ 6 ಕೆಜಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದ್ದು, ಮರುದಿನ ಬೆಳಗ್ಗೆ ವಿಮಾನದಲ್ಲಿ ಬಂದ ಪ್ರಯಾಣಿಕನೊಬ್ಬನಿಂದ 2.5 ಕೆಜಿ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ಯಾಕೆಟ್‌ಗಳ ಮೇಲೆ ತೆಂಗಿನಕಾಯಿ ಕ್ರಿಸ್ಪ್ಸ್ ಮತ್ತು `ಕ್ರಿಸ್ಪಿ ಪೀಚ್’ ಎಂಬ ಅಲಂಕಾರಿಕ ವಸ್ತುಗಳ ಹೆಸರುಗಳಿದ್ದವು.