ನೃತ್ಯ ಮಾಡುವಾಗಲೇ ಹಾರ್ಟ್‌ ಅಟ್ಯಾಕ್‌ನಿಂದ ʼಗರ್ಬಾ ಕಿಂಗ್‌ʼ ಅಶೋಕ್‌ ಮಾಲಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದಸರಾ ನವರಾತ್ರಿ ಹಬ್ಬ ಎಷ್ಟು ವಿಶೇಷ ಎಂದು ಹೇಳಬೇಕಾಗಿಲ್ಲ. ಈ 9 ದಿನಗಳಲ್ಲಿ ನವ ದುರ್ಗೆಯರ ಪೂಜೆಯ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತದೆ.

ಇತ್ತೀಚೆಗಷ್ಟೇ ನವರಾತ್ರಿ ಉತ್ಸವದ ವೇಳೆ ಖ್ಯಾತ ಕಲಾವಿದರೊಬ್ಬರು ಗರ್ಬಾ ನೃತ್ಯ ಮಾಡುತ್ತಿದ್ದಾಗ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗರ್ಬಾ ಕಿಂಗ್ ಎಂದೇ ಖ್ಯಾತರಾಗಿದ್ದ ಖ್ಯಾತ ಕಲಾವಿದ ಅಶೋಕ್ ಮಾಲಿ (54) ಸೋಮವಾರ ಪುಣೆ ಜಿಲ್ಲೆಯ ಖೇಡ್‌ನಲ್ಲಿ ನವರಾತ್ರಿ ಉತ್ಸವದ ವೇಳೆ ಗರ್ಬಾ ಪ್ರದರ್ಶನ ಮಾಡುವಾಗ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ.

ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅಶೋಕ್ ಮಾಲಿ ಗರ್ಭಾ ನೃತ್ಯ ಮಾಡುವುದನ್ನು ಕಾಣಬಹುದು. ಅವರೊಂದಿಗೆ ಮತ್ತೊಬ್ಬ ಬಾಲಕ ಡ್ಯಾನ್ಸ್ ಮಾಡುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಸುತ್ತಮುತ್ತಲಿನ ನೂರಾರು ಜನರು ಚಪ್ಪಾಳೆ ತಟ್ಟುವುದು ಮತ್ತು ಮೊಬೈಲ್ ಫೋನ್‌ಗಳಲ್ಲಿ ವೀಡಿಯೊಗಳನ್ನು ರೆಕಾರ್ಡ್​​ ಮಾಡುತ್ತಿರುವುದನ್ನು ಕಾಣಬಹುದು. ಆದರೆ ಡ್ಯಾನ್ಸ್ ಮಾಡುತ್ತಿದ್ದ ಅಶೋಕ್ ಏಕಾಏಕಿ ಕುಸಿದು ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!