Wednesday, July 6, 2022

Latest Posts

ಗರೀಬ್ ಕಲ್ಯಾಣ್ ಯೋಜನೆ ವಿಸ್ತರಣೆ: ಪ್ರಧಾನಿ ಮೋದಿಗೆ ಧನ್ಯವಾದ ಸಲ್ಲಿಸಿದ ಜೆ.ಪಿ ನಡ್ಡಾ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದ 80 ಕೋಟಿ ಜನರಿಗೆ ನವೆಂಬರ್‌ವರಗೆ ಉಚಿತ ಆಹಾರ ಧಾನ್ಯ ನೀಡುವುದಾಗಿ ಘೋಷಿಸಿದ ಪ್ರಧಾನಿ ಮೋದಿ ಅವರಿಗೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಧನ್ಯವಾದ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿದ ಬಿಜೆಪಿ ಅಧ್ಯಕ್ಷರು, ‘ಎಲ್ಲಾ ದೇಶವಾಸಿಗಳಿಗೆ ಉಚಿತ ಲಸಿಕೆಗಳನ್ನು ಒದಗಿಸಿದ್ದಕ್ಕಾಗಿ ಮತ್ತು ದೀಪಾವಳಿವರೆಗೆ 80 ಕೋಟಿ ಜನರಿಗೆ ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ವಿಸ್ತರಿಸಿದ್ದಕ್ಕಾಗಿ ನಾವು ಪ್ರಧಾನಿ ಮೋದಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತೇವೆ. ಪ್ರತಿಯೊಬ್ಬ ವ್ಯಕ್ತಿಗೂ ಆಹಾರ ಪಡೆಯಬೇಕು ಮತ್ತು ಪ್ರತಿಯೊಬ್ಬರಿಗೂ ಲಸಿಕೆ ನೀಡಬೇಕು ಎಂಬುದು ನಮ್ಮ ಧ್ಯೇಯವಾಕ್ಯವಾಗಿದೆ’ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss