ಪಾಕಿಸ್ತಾನ ಮುಖ್ಯ ಕೋಚ್ ಹುದ್ದೆಗೆ ಗುಡ್ ಬೈ ಹೇಳಿದ ಗ್ಯಾರಿ ಕರ್ಸ್ಟನ್!

ಹೊಸದಿಗಂತ ಡಿಜಿಟಲ್ ಡೆಸ್ಕ್;

ಪಾಕಿಸ್ತಾನ್ ತಂಡದ ಮುಖ್ಯ ಕೋಚ್ ಹುದ್ದೆಗೆ ಗ್ಯಾರಿ ಕರ್ಸ್ಟನ್ ರಾಜೀನಾಮೆ ನೀಡಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮತ್ತು ಕೆಲವು ಆಟಗಾರರೊಂದಿಗೆ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದು, ಹೀಗಾಗಿ ಕೋಚ್ ಹುದ್ದೆಯನ್ನು ತೊರೆದಿದ್ದಾರೆ ಎಂದು ವರದಿಯಾಗಿದೆ.

ನವೆಂಬರ್ 4 ರಂದು ಮೆಲ್ಬೋರ್ನ್‌ನಲ್ಲಿ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಹಾಗೂ ಟಿ20 ಸರಣಿಗಾಗಿ ಪಾಕಿಸ್ತಾನ್ ತಂಡದೊಂದಿಗೆ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸುತ್ತಿಲ್ಲ. ಹೀಗಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಕೂಡ ಬದಲಿ ಕೋಚ್ ಆಯ್ಕೆ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದೆ ವರದಿಯಾಗಿತ್ತು.

ಇದೀಗ ಈ ವರದಿ ನಿಜವಾಗಿದ್ದು, ಕೇವಲ 6 ತಿಂಗಳಲ್ಲೇ ಪಾಕಿಸ್ತಾನ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ಗ್ಯಾರಿ ಕರ್ಸ್ಟನ್ ಕೆಳಗಿಳಿದಿದ್ದಾರೆ. ಸೌತ್ ಆಫ್ರಿಕಾದ ಮಾಜಿ ಆಟಗಾರನ ಈ ನಿರ್ಧಾರಕ್ಕೆ ಮುಖ್ಯ ಕಾರಣ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ನಡುವೆ ಭಿನ್ನಾಭಿಪ್ರಾಯ.

ಪಾಕ್ ತಂಡದ ಉನ್ನತ-ಕಾರ್ಯಕ್ಷಮತೆಯ ತರಬೇತುದಾರರನ್ನಾಗಿ ಡೇವಿಡ್ ರೀಡ್ ಅವರನ್ನು ನೇಮಿಸುವಂತೆ ಕರ್ಸ್ಟನ್ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಗೆ ಮನವಿ ಮಾಡಿದ್ದರು. ಆದರೆ ಈ ಕೋರಿಕೆಗೆ ಪಾಕ್ ಕ್ರಿಕೆಟ್ ಮಂಡಳಿ ಒಲವು ತೋರಿಲ್ಲ. ಇದರಿಂದ ಪಿಸಿಬಿ ಹಾಗೂ ಕೋಚ್ ನಡುವೆ ಭಿನ್ನಾಭಿಪ್ರಾಯ ಮೂಡಿದೆ.

ಅತ್ತ ಕೆಲ ಆಟಗಾರರ ಜೊತೆಗೂ ಗ್ಯಾರಿ ಕರ್ಸ್ಟನ್ ಉತ್ತಮ ಸಂಬಂಧ ಹೊಂದಿಲ್ಲ. ಈ ಬಗ್ಗೆ ಆಟಗಾರರು ಕೂಡ ಪಾಕ್ ಕ್ರಿಕೆಟ್ ಮಂಡಳಿಗೆ ದೂರು ನೀಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳಿಂದ ಕರ್ಸ್ಟನ್ ಕೋಚ್ ಹುದ್ದೆಗೆ ಗುಡ್ ಬೈ ಹೇಳಿದ್ದಾರೆ.

ನೂತನ ಮುಖ್ಯ ಕೋಚ್ ನೇಮಕ
ಇದೀಗ ಅವರ ಜಾಗಕ್ಕೆ ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಜೇಸನ್ ಗಿಲ್ಲೆಸ್ಪಿ ಅವರನ್ನು ಪಾಕಿಸ್ತಾನದ ಏಕದಿನ ಹಾಗೂ ಟಿ20 ತಂಡಕ್ಕೆ ನೂತನ ಮುಖ್ಯ ಕೋಚ್ ಆಗಿ ನೇಮಿಸಿದೆ.

ಗ್ಯಾರಿ ಕರ್ಸ್ಟನ್ ರಾಜೀನಾಮೆ ನೀಡಿದ ಕೆಲವೇ ಕ್ಷಣಗಳಲ್ಲಿ ಅದನ್ನು ಅಂಗೀಕರ ಮಾಡಿದ ಪಾಕ್ ಮಂಡಳಿ, ಆ ಕ್ಷಣವೇ ತಂಡಕ್ಕೆ ನೂತನ ಮುಖ್ಯ ಕೋಚ್ ಆಗಿ ಗಿಲ್ಲೆಸ್ಪಿ ಅವರನ್ನು ನೇಮಿಸಿದೆ. ಪಾಕ್ ಮಂಡಳಿಯ ಈ ಹಠಾತ್ ನಿರ್ಧಾರದಿಂದ ಸಾಕಷ್ಟು ಪ್ರಶ್ನೆಗಳು ಹುಟ್ಟಿಕೊಂಡಿದ್ದು, ಮಂಡಳಿಯೇ ಗ್ಯಾರಿ ಅವರಿಂದ ಒತ್ತಾಯ ಪೂರ್ವಕವಾಗಿ ರಾಜೀನಾಮೆ ಪಡೆದಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!