ಹಾಸ್ಟೆಲ್‌ ನಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು 10 ವಿದ್ಯಾರ್ಥಿಗಳಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಉತ್ತರ ಪ್ರದೇಶದ ಬುಲಂದ್ ಶಹರ್ ನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಹಾಸ್ಟೆಲ್ ಒಳಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಹತ್ತು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಡೆದಿದೆ.
ಹಾಸ್ಟೆಲ್ ನ ಅಡುಗೆ ಕೋಣೆಯೊಳಗೆ ಆಹಾರ ತಯಾರಿಸುವಾಗ 5 ಕೆಜಿ ತೂಕದ ಸಣ್ಣ ಗಾತ್ರದ ಸಿಲಿಂಡರ್ ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗಾಯಗೊಂಡವರನ್ನು ಚಿಕಿತ್ಸೆಗೆ ಅಲಿಘರ್ ನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರಪ್ರಕಾಶ್ ಸಿಂಗ್ ಮಾಹಿತಿ ನೀಡಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಅಲಿಘರ್ ನ ಮುಖ್ಯ ವೈದ್ಯಕೀಯ ಅಧಿಕಾರಿಯೊಂದಿಗೆ ಡೆಪ್ಯೂಟಿ ಕಲೆಕ್ಟರ್‌ ಆಸ್ಪತ್ರೆಯಲ್ಲಿ ಹಾಜರಿದ್ದಾರೆಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!