ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು 7 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮೊದಲು ಪಟಾಕಿ ಸ್ಫೋಟಗೊಂಡಿದ್ದು, ಅದರಿಂದಾಗಿ ಸಿಲಿಂಡರ್ಗೆ ಬೆಂಕಿ ತಗುಲಿ ಸ್ಫೋಟಗೊಂಡಿದೆ ಎನ್ನಲಾಗಿದೆ.
ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಕಟ್ಟಡದಾದ್ಯಂತ ವ್ಯಾಪಿಸಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದ್ದು, ಏಳು ಮಂದಿ ಸಾವನ್ನಪ್ಪಿ, ಹಲವಾರು ಮಂದಿ ಗಾಯಗೊಂಡಿದ್ದಾರೆ.