April 16, 2026
Thursday, April 16, 2026
spot_img

ಒಂದು ವಾರದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಸಿಗಲಿದೆ ಪರಿಹಾರ: ಸಚಿವ ಕೆ.ಎಚ್. ಮುನಿಯಪ್ಪ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮದ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ದೇಶದ ವಿವಿದೆಡೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಅಭಾವ ಕಾಣಿಸಿಗೊಂಡಿದ್ದು, ಕರ್ನಾಟಕದಲ್ಲೂ ಕೂಡ ಸಿಲಿಂಡರ್ ಪೂರೈಕೆಯಲ್ಲಿ ಅಡೆತಡೆಗಳು ಉಂಟಾಗಿದೆ .

ಇದರ ನಡುವೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಜನತೆಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಇನ್ನು ಒಂದು ವಾರದೊಳಗೆ ರಾಜ್ಯದಲ್ಲಿ ಅನಿಲ ಸಿಲಿಂಡರ್ ವಿತರಣೆಯ ವಿಳಂಬ ಮತ್ತು ತಾಂತ್ರಿಕ ಸಮಸ್ಯೆಗಳು ಬಗೆಹರಿಯಲಿವೆ ಎಂದು ಭರವಸೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಲ್ಲಿ ಮಾತನಾಡಿದ ಅವರು, ಈಗಾಗಲೇ ಭಾರತದತ್ತ ಇರಾನ್ ನಿಂದ ಗ್ಯಾಸ್ ಹೊತ್ತು ಹಡಗುಗಳು ಪ್ರಯಾಣ ಬೆಳೆಸಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಸಮಸ್ಯೆಗಳಿಗೆ ತಾರ್ಕಿಕ ಅಂತ್ಯ ಸಿಗಲಿದೆ ಎಂದು ಹೇಳಿದರು.

ಹೊಟೇಲ್ ಸಿಬ್ಬಂದಿಗಳು ಕೂಡ ತಾತ್ಕಾಲಿಕವಾಗಿ ಪರಿಸ್ಥಿತಿಗೆ ಹೊಂದಿಕೊಳ್ಳಬೇಕು. ಶೀಘ್ರವೇ ಸರಕಾರ ಎಲ್ಲಾ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಿದೆ. ಈ ವಿಚಾರವಾಗಿ ಸೋಮವಾರ ಅಧಿಕಾರಿಗಳ ಸಭೆ ಕರೆದಿದ್ದು,ಚರ್ಚೆ ನಡೆಯಲಿದೆ ಎಂದು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !