June 15, 2026
Monday, June 15, 2026
spot_img

ಗ್ಯಾಸ್ ಸಿಲಿಂಡರ್ ಅಭಾವ: ಚೆನ್ನೈನಲ್ಲಿ ರೆಸ್ಟೋರೆಂಟ್‌ಗಳಿಗೆ ಸಂಕಷ್ಟ, ಬಂದ್ ಭಯದಲ್ಲಿ ಮಾಲೀಕರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಏಷ್ಯಾದಲ್ಲಿ ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚಾದ ಹಿನ್ನೆಲೆಯಲ್ಲಿ ದೇಶದಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ. ಇದರ ಪರಿಣಾಮವಾಗಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ, ಕೆಲ ಪ್ರದೇಶಗಳಲ್ಲಿ ಗ್ಯಾಸ್ ಅಭಾವ ಎದುರಾಗುತ್ತಿರುವುದಾಗಿ ವರದಿಯಾಗಿದೆ.

ತಮಿಳುನಾಡಿನ ಚೆನ್ನೈ ಸೇರಿದಂತೆ ಹಲವು ನಗರಗಳಲ್ಲಿ ವಾಣಿಜ್ಯ ಸಿಲಿಂಡರ್ ಸರಬರಾಜು ಕಡಿಮೆಯಾಗಿರುವುದರಿಂದ ಹೋಟೆಲ್ ಹಾಗೂ ರೆಸ್ಟೋರೆಂಟ್ ಮಾಲೀಕರು ಸಂಕಷ್ಟ ಎದುರಿಸುತ್ತಿದ್ದಾರೆ. ಹಲವಾರು ವಿತರಕರು ಸಿಲಿಂಡರ್ ಸ್ಟಾಕ್ ಇಲ್ಲ ಎಂದು ತಿಳಿಸುತ್ತಿದ್ದು, ಅನೇಕ ಹೋಟೆಲ್‌ಗಳು ಕಾರ್ಯಾಚರಣೆ ನಡೆಸಲು ಕಷ್ಟಪಡುತ್ತಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ:

ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಚೆನ್ನೈ ಹೋಟೆಲ್ ಅಸೋಸಿಯೇಷನ್ ತಮಿಳುನಾಡು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ. ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆ ಸರಿಯಾಗಿ ಆಗದಿದ್ದರೆ ಅನೇಕ ರೆಸ್ಟೋರೆಂಟ್‌ಗಳು ತಾತ್ಕಾಲಿಕವಾಗಿ ಮುಚ್ಚುವ ಪರಿಸ್ಥಿತಿ ಎದುರಾಗಬಹುದು ಎಂದು ಅಸೋಸಿಯೇಷನ್ ಎಚ್ಚರಿಸಿದೆ.

ಸರ್ಕಾರ ತಕ್ಷಣ ಮಧ್ಯಪ್ರವೇಶ ಮಾಡಿ ವಾಣಿಜ್ಯ ಸಿಲಿಂಡರ್ ಸರಬರಾಜು ವ್ಯವಸ್ಥೆಯನ್ನು ಸುಧಾರಿಸಬೇಕು ಹಾಗೂ ಹೋಟೆಲ್ ಉದ್ಯಮಕ್ಕೆ ಉಂಟಾಗಿರುವ ಸಮಸ್ಯೆಯನ್ನು ಶೀಘ್ರ ಪರಿಹರಿಸಬೇಕು ಎಂದು ಅಸೋಸಿಯೇಷನ್ ಮನವಿ ಮಾಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !