ಗ್ಯಾಸ್ ಸೋರಿಕೆಯಾಗಿ ಅಗ್ನಿ ದುರಂತ: ಒಂದೇ ಕುಟುಂಬದ ಮೂವರ ದುರ್ಮರಣ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಡುಗೆ ವೇಳೆ ಅನಿಲ ಸೋರಿಕೆಯಾಗಿ ಉಂಟಾದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಕನಕಪುರದ ಅಮರನಾರಾಯಣ ಬ್ಲಾಕ್‌ನಲ್ಲಿ ಸಂಭವಿಸಿದೆ. ಮೃತರನ್ನು ಸಿದ್ದರಾಜು (55), ಅವರ ಪತ್ನಿ ಚಂದ್ರಮ್ಮ (50) ಹಾಗೂ ಪುತ್ರ ಪ್ರಶಾಂತ್ (22) ಎಂದು ಗುರುತಿಸಲಾಗಿದೆ. ನಾಲ್ಕು ದಿನಗಳ ಹಿಂದೆ ಮನೆಯ ಅಡುಗೆಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಅಚಾನಕ್ ಬೆಂಕಿ ಹೊತ್ತಿಕೊಂಡಿತ್ತು. ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡ ಮೂವರನ್ನೂ ತಕ್ಷಣ ಬೆಂಗಳೂರಿನ ವಿಕ್ಟೋರಿಯಾ … Continue reading ಗ್ಯಾಸ್ ಸೋರಿಕೆಯಾಗಿ ಅಗ್ನಿ ದುರಂತ: ಒಂದೇ ಕುಟುಂಬದ ಮೂವರ ದುರ್ಮರಣ!