ಗುಜರಾತ್‌ನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆ, 28 ಮಂದಿ ಆಸ್ಪತ್ರೆಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್‌ನ ಭರೂಚ್ ಜಿಲ್ಲೆಯ ಜಂಬೂಸರ್ ಬಳಿ ರಾಸಾಯನಿಕ ಕಾರ್ಖಾನೆಯಿಂದ ಅನಿಲ ಸೋರಿಕೆಯಾಗಿದ್ದು, 29 ಮಂದಿ ಅಸ್ವಸ್ಥರಾಗಿದ್ದಾರೆ.

ಕಾರ್ಖಾನೆಯೊಳಗಿದ್ದ 28 ಮಂದಿ ವಿಷಕಾರಿ ಅನಿಲವನ್ನು ಉಸಿರಾಡಿ ಅಸ್ವಸ್ಥರಾಗಿದ್ದಾರೆ. ತಕ್ಷಣವೇ ಅಸ್ವಸ್ಥರಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ.

ಫ್ಯಾಕ್ಟರಿಯಲ್ಲಿ ಬೆಂಕಿ ಹೊತ್ತಿದ್ದು, ಅದರಿಂದಾಗಿ ಬ್ರೋಮಿನ್ ಅನಿಲ ಸೋರಿಕೆಯಾಗಿದೆ. ಒಟ್ಟಾರೆ 2 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಈ ಸಮಯ ಕಾರ್ಖಾನೆಯಲ್ಲಿ ಇದ್ದರು ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!