ಆಂಧ್ರ ಪ್ರದೇಶದ ಉಡುಪು ತಯಾರಿಕಾ ಕಾರ್ಖಾನೆಯಲ್ಲಿ ಅನಿಲ ಸೋರಿಕೆ:‌ 87 ಜನ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಆಂಧ್ರಪ್ರದೇಶದ ಅಚ್ಯುತಪುರಂ ಜಿಲ್ಲೆಯ ಬ್ರಾಂಡಿಕ್ಸ್ ವಿಶೇಷ ಆರ್ಥಿಕ ವಲಯ (SEZ) ನಲ್ಲಿರುವ ಉಡುಪು ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆಯುಂಟಾಗಿದ್ದು ಇದರಿಂದ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 87 ಮಂದಿ ಅಸ್ವಸ್ಥರಾಗಿದ್ದಾರೆ. ಇದುವರೆಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಮೂಲಗಳು ವರದಿ ಮಾಡಿವೆ.

ಅಸ್ವಸ್ಥರಾಗಿರುವ 87 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರ ಸ್ಥಿತಿಯೂ ಸ್ಥಿರವಾಗಿದೆ. ಅನಿಲ ಸೋರಿಕೆಯಾಗಲು ಕಾರಣವೇನು ಎಂಬುದು ಇನ್ನೂ ಪತ್ತೆಯಾಗಿಲ್ಲ. ವಾಂತಿ ಮತ್ತು ವಾಕರಿಕೆಯಿಂದಾಗಿ ಮಹಿಳಾ ಉದ್ಯೋಗಿಗಳು ಪ್ರಜ್ಞಾಹೀನರಾಗಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಮಾಲಿನ್ಯ ನಿಯಂತ್ರಣ ಮಂಡಳಿಯು ಮಾದರಿಗಳನ್ನು ತೆಗೆದುಕೊಂಡಿದ್ದು, ಪರೀಕ್ಷೆಗಾಗಿ ಸಿಕಂದರಾಬಾದ್‌ನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿಗೆ (ಐಐಸಿಟಿ) ಕಳುಹಿಸಲಾಗಿದೆ.

ಈ ಕುರಿತು ತನಿಖೆ ಜಾರಿಯಲ್ಲಿದೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!