ಇರಾಕ್ ನ ಬಾಗ್ದಾದ್ ನಲ್ಲಿ ಗ್ಯಾಸ್ ಟ್ಯಾಂಕರ್ ಸ್ಫೋಟ: 9 ಜನರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಶನಿವಾರ ರಾತ್ರಿ ಬಾಗ್ದಾದ್‌ನಲ್ಲಿ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದ್ದು, ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಭದ್ರತಾ ಪಡೆಗಳು ತಿಳಿಸಿವೆ.
ಪೂರ್ವ ಬಾಗ್ದಾದ್‌ನ ವಸತಿ ಪ್ರದೇಶದಲ್ಲಿರುವ ಫುಟ್‌ಬಾಲ್ ಮೈದಾನದ ಬಳಿ ಕಾರ್ ಪಾರ್ಕ್‌ನಲ್ಲಿ ಸ್ಫೋಟ ಸಂಭವಿಸಿದ್ದು, ಇದೊಂದು ಆಕಸ್ಮಿಕ ಘಟನೆ ಎನ್ನಲಾಗಿದೆ.
ಟ್ಯಾಂಕರ್ ಸ್ಫೋಟದಲ್ಲಿ ಒಂಬತ್ತು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಬಾಗ್ದಾದ್‌ನಲ್ಲಿ ಭದ್ರತಾ ಪಡೆಗಳ ಕಮಾಂಡರ್ ಅಹ್ಮದ್ ಸಲೀಂ ಹೇಳಿಕೆಯಲ್ಲಿ ತಿಳಿಸಿದ್ದಾರೆ.
“ಸ್ಫೋಟವು ಅಪಘಾತವಾಗಿದೆ ಮತ್ತು ಭಯೋತ್ಪಾದನೆಯ ಕೃತ್ಯವಲ್ಲ” ಎಂದು ಅವರು ಹೇಳಿದ್ದಾರೆ. ಸ್ಫೋಟದ ತೀವ್ರತೆಗೆ ಸಮೀಪದ ಕಟ್ಟಡಗಳ ಗಾಜುಗಳು ಹಾರಿಹೋಗಿದ್ದು, ವಾಹನಗಳಿಗೆ ಹಾನಿಯಾಗಿದೆ ಎಂದು ಎಎಫ್‌ಪಿ ವರದಿಗಾರ ತಿಳಿಸಿದ್ದಾರೆ. ಇರಾಕ್‌ನ ಇತ್ತೀಚೆಗೆ ಆಯ್ಕೆಯಾದ ಅಧ್ಯಕ್ಷ ಅಬ್ದುಲ್ ಲತೀಫ್ ರಶೀದ್ ಅವರು ಅಪಘಾತಕ್ಕೆ ಕಾರಣರಾದವರನ್ನು ಗುರುತಿಸಲು ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!