ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಸಂಚಾರ ಸ್ಥಗಿತ

ಹೊಸದಿಗಂತ , ಹಾಸನ:

ಶಿರಾಡಿಘಾಟ್ ರಸ್ತೆ ಎನ್.ಎಚ್.75 ರಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕ‌ರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿದ್ದು ಶಿರಾಡಿಘಾಟ್ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ. ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ.

ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ವಾಹನಗಳ ಸಂಚಾರ ಬಂದ್ ಮಾಡಲಾಗಿದ್ದು ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದಾರೆ. ಶಿರಾಡಿಘಾಟ್ ರಸ್ತೆಯ ಮಾರ್ಗಮಧ್ಯೆಯೇ ಕೆಲ ವಾಹಗಳು ಸಿಲುಕಿಕೊಂಡಿವೆ.

ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಢಿಘಾಟ್ ಮಾರ್ಗದ ಸಂಚಾರಕ್ಕೆ ರಾತ್ರಿ 12 ಗಂಟೆವರೆಗೆ ಎಲ್ಲಾ ರೀತಿಯ ವಾಹನ ಸಂಚಾರ ನಿಷೇದಿಸಿದೆ ಎಂದು ಡಿಸಿ ಸತ್ಯಭಾಮ ಅವರು ಆದೇಶ ಹೊರಡಿಸಿದ್ದಾರೆ.

ಪಲ್ಟಿಯಾದ ಟ್ಯಾಂಕರ್‌ನಿಂದ‌ ಗ್ಯಾಸ್ ಸೋರಿಕೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಡಿಸಿ ಸಿ.ಸತ್ಯಭಾಮ ಅವರು, ಸಕಲೇಶಪುರ ಮೂಲಕ ಬೆಂಗಳೂರಿನಿಂದ ಮಂಗಳೂರಿಗೆ ಹೋಗುವ ವಾಹನಗಳು ಹಾಸನ ಬೇಲೂರು, ಹಾನುಬಾಳು, ಮೂಡಿಗೆರೆ, ಚಾರ್ಮಾಡಿ ಘಾಟ್ ಮೂಲಕ‌ ಸಂಚಾರಕ್ಕೆ ಸೂಚನೆ ನಿಡಿದ್ದಾರೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸುಳ್ಯ, ಸಂಪಾಜೆ ಮಡಿಕೇರಿ ಮೂಲಕ ಸಂಚರಿಸಲು ನಿರ್ದೇಶನ ನೀಡಿ ಡಿಸಿ ಆದೇಶ ನೀಡಿದ್ದು, ಗ್ಯಾಸ್ ಸೋರಿಕೆ ನಿಲ್ಲಿಸಿ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಲು ತಜ್ಞರ ತಂಡ ಪರಿಶೀಲನೆ ನಡೆಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!