ಹೊಸದಿಗಂತ ವರದಿ ನಾಗಮಂಗಲ :
ಗ್ಯಾಸ್ಟ್ರೋ ಎಂಟರಾಲಜಿ ಮತ್ತು ಅಂಗಾಂಗ ಕಸಿಗೆ ಹೆಚ್ಚು ಆದ್ಯತೆ ಕೊಟ್ಟು ಕರ್ನಾಟಕವನ್ನು ಆರೋಗ್ಯವಂತ ರಾಜ್ಯವನ್ನಾಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಆರ್.ಪಾಟೀಲ್ ತಿಳಿಸಿದರು.
ತಾಲೂಕಿನ ಬಿ.ಜಿ.ನಗರದಲ್ಲಿರುವ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಬಿಜಿಎಸ್ ಆಡಿಟೋರಿಯಂನಲ್ಲಿ ನಡೆದ ಪ್ರಥಮ ವರ್ಷದ ಎಂಬಿಬಿಎಸ್ ಮತ್ತು ಸಂಬಂಧಿತ ಆರೋಗ್ಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಭೈರವೈಕ್ಯ ಡಾ.ಬಾಲಗಂಗಾಧರನಾಥಶ್ರೀಗಳ ಪರಿಶ್ರಮದ ಫಲವಾಗಿ ಗ್ರಾಮೀಣ ಭಾಗದಲ್ಲಿ ಸ್ಥಾಪಿತಗೊಂಡಿರುವ ಈ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯನ್ನು ಡಾ.ನಿರ್ಮಲಾನಂದನಾಥಶ್ರೀಗಳು ಉನ್ನತ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ಇಂತಹ ಪವಿತ್ರ ಕ್ಷೇತ್ರದಲ್ಲಿ ಶಿಕ್ಷಣ ಪಡೆಯುತ್ತಿರುವುದು ನಿಮಗೆ ಸಿಕ್ಕಿರುವ ಶ್ರೇಷ್ಟ ಅವಕಾಶ. ಸರ್ಕಾರ ಮಾಡಬೇಕಾದ ಕಾರ್ಯಗಳನ್ನು ಶ್ರೀಮಠ ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದು ಶ್ಲಾಘಿಸಿದರು.
ಗ್ಯಾಸ್ಟ್ರೋ ಎಂಟರಾಲಜಿ ಮತ್ತು ಅಂಗಾಂಗ ಕಸಿಗೆ ಹೆಚ್ಚು ಆದ್ಯತೆ: ಡಾ.ಶರಣಪ್ರಕಾಶ ಪಾಟೀಲ್

