April 12, 2026
Sunday, April 12, 2026
spot_img

ಬೆಂಗಳೂರು ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳ ಬೀದಿ ವ್ಯಾಪಾರಕ್ಕೆ ಶೀಘ್ರವೇ ಗೇಟ್ ಪಾಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳಲ್ಲಿ ಪಾದಚಾರಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ನಿರಂತರ ದೂರು ಕೇಳಿ ಬರುವ ಹಿನ್ನೆಲೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಖಡಕ್ ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ಯಾರು ಕೂಡ ಪುಟ್ ಪಾತ್ ಗಳಲ್ಲಿ ಬೀದಿ ವ್ಯಾಪಾರ ನಡೆಸಬಾರದು ಎಂದು ತಿಳಿಸಿದ್ದಾರೆ.

ಈ ಕುರಿತು ಇಂದು ವಿಧಾನಸೌಧದಲ್ಲಿ ಬೆಂಗಳೂರಿನಲ್ಲಿ ಪಾದಚಾರಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಹಾಗು ಪಾರ್ಕಿಂಗ್ ನೀತಿಗೆ ಸಂಬಂಧಿಸಿದಂತೆ ಶಾಸಕರೊಂದಿಗೆ ಸಭೆ ನಡೆಸಿದರು.

ಬಳಿಕ ಮಾತನಾಡಿದ ಡಿಕೆಶಿ, ಸಾಕಷ್ಟು ಹಣ ಹಾಕಿ ಫುಟ್‌ಪಾತ್‌ ಸಿದ್ದ ಪಡಿಸಲಾಗಿದೆ. ಆದರೆ ಬೀದಿ ಬದಿ ವ್ಯಾಪಾರಿಗಳು ಆಕ್ರಮಿಸಿಕೊಂಡಿದ್ದು, ಈ ಕುರಿತು ಪಾದಚಾರಿಗಳಿಂದ ಅನೇಕ ಬಾರಿ ದೂರುಗಳು ಬಂದಿದ್ದು, ಈ ಹಿನ್ನೆಲೆ ಫುಟ್‌ಪಾತ್‌ ನೀತಿ ತರಲು ನಿರ್ಧರಿಸಲಾಗಿದೆ ಎಂದರು.

ಪುಟ್ ಪಾತ್ ನಿಂದ ಅಂಗಡಿಗಳು ತೆರವಾದ ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಅವರಿಗಾಗಿ ಸ್ಥಳಗಳನ್ನು ಗೊತ್ತುಪಡಿಸಲಾಗಿದ್ದು, ಅಲ್ಲಿ ಅವರು ತಮ್ಮ ವ್ಯಾಪಾರಗಳನ್ನು ನಡೆಸಬಹುದು. ಒಂದೇ ವೇಳೆ ಅವರು ತಮ್ಮಗೆ ಗೊತ್ತುಪಡಿಸಿದ ಸ್ಥಳ ಬಿಟ್ಟು ಬೇರೆ ಕಡೆ ಹೋದರೆ ಅಲ್ಲಿಂದಲ್ಲೂ ಅವರನ್ನು ಹೊರಕಳುಹಿಸಬೇಕಾಗಬಹುದು ಎಂದು ಎಚ್ಚರಿಕೆ ನೀಡಿದರು.

ನಗರದಲ್ಲಿ ಒಟ್ಟು 60,000 ಮಾರಾಟಗಾರರು ನೋಂದಣಿ ಮಾಡಿಕೊಂಡಿದ್ದು, 30,000 ಜನರು ತಳ್ಳೋ ಗಾಡಿ ಬೇಕು ಎಂದು ಕೇಳಿದ್ದಾರೆ. ಇನ್ನು ಯಾರಿಗೆ ಬೀದಿಬದಿ ವ್ಯಾಪಾರಿಗಳ ಗುರುತಿನ ಚೀಟಿ ಇದ್ದೆ ಅವರು ಮಾತ್ರವ್ಯಾಪಾರ ಮಾಡಲು ಅವಕಾಶ ನೀಡಲಾಗುವುದು. ಗುರುತಿನ ಚೀಟಿ ಹೊಂದಿಲ್ಲದವರಿಗೆ ಬೀದಿ ಬದಿಯಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ತಿಳಿಸಿದರು ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !