ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ಮಾಜಿ ಮುಖ್ಯಮಂತ್ರಿ ಅರುಣ್ ಗೊಗೋಯ್ ಅವರ ಪುತ್ರ ಗೌರವ್ ಗೊಗೋಯ್ ಅವರನ್ನು ಲೋಕಸಭೆಯ ಕಾಂಗ್ರೆಸ್ ಉಪನಾಯಕರನ್ನಾಗಿ ನೇಮಿಸಲಾಗಿದೆ. ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿದ್ದಾರೆ.
ಮುಂಬರುವ ಮುಂಗಾರು ಅಧಿವೇಶನದಲ್ಲಿ ಪಕ್ಷವನ್ನು ಬಲಪಡಿಸಲು ಈ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಗೌರವ್ ಗೊಗೋಯ್ ಅವರು 2020 ರಲ್ಲಿ ಉಪನಾಯಕರಾಗಿ ಆಯ್ಕೆಯಾಗಿದ್ದರು.
ಗೌರವ್ ಗೊಗೋಯ್ ಅವರು ಅಸ್ಸಾಂನ ಜೋರ್ಹತ್ ಕ್ಷೇತ್ರದ ಲೋಕಸಭಾ ಸಂಸದರಾಗಿದ್ದಾರೆ. ಚುನಾವಣೆಯಲ್ಲಿ 1,44,393 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರು. ಗೌರವ್ ಗೊಗೋಯ್ ಅವರು ಸಾಮಾನ್ಯವಾಗಿ ಕಾಂಗ್ರೆಸ್ ಪರವಾಗಿ ಸಂಸತ್ತಿನಲ್ಲಿ ಪಕ್ಷದ ಚರ್ಚೆಗಳಲ್ಲಿ ಭಾಗವಹಿಸುತ್ತಾರೆ.