ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ನೇತೃತ್ವದ ಹೈಕೋರ್ಟ್ ಪೀಠವು ಆರು ವರ್ಷಗಳ ನಂತರ ನವೀನ್ ಕುಮಾರ್, ಅಮಿತ್ ಮತ್ತು ಎಚ್‌ಎಲ್ ಸುರೇಶ್‌ಗೆ ಜಾಮೀನು ನೀಡಿದೆ.
ಆರೋಪಿಗಳ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ನ್ಯಾಯಾಲಯ ಕೆಲವು ಷರತ್ತುಗಳನ್ನು ವಿಧಿಸಿದ್ದು. ಈ ಷರತ್ತುಗಳು ಪೂರ್ಣಗೊಂಡರೆ, ಆರೋಪಿಗಳನ್ನು ಇಂದು ಸಂಜೆ ಅಥವಾ ನಾಳೆ ಬಿಡುಗಡೆ ಮಾಡುವ ಸಾಧ್ಯತೆಯಿದೆ.