ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪ ಎದುರಿಸುತ್ತಿದ್ದ ಎನ್.ಮೋಹನ್ ನಾಯಕ್ ಜಾಮೀನು ಅರ್ಜಿ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಈ ಬಗ್ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಆರೋಪಿ ವಿಚಾರಣೆಗೆ ಸಹಕರಿಸುತ್ತಿದ್ದಾನೆ. ಈ ಹಿನ್ನಲೆಯಲ್ಲಿ ಜಾಮೀನು ರದ್ದು ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು. ಇದನ್ನು ಗಮನಿಸಿದ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದ್ದು, ಮೋಹನ್ ನಾಯಕ್ ಜಾಮೀನು ರದ್ದುಗೊಳಿಸಲು ನಿರಾಕರಿಸಿದೆ. ಹೈಕೋರ್ಟ್ ಆದೇಶದಲ್ಲಿ ತಾನು ಮಧ್ಯಪ್ರವೇಶಿಸಲು ಇಚ್ಛಿಸುವುದಿಲ್ಲ ಎಂದು ಹೇಳಿದೆ.
2023ರ ಡಿಸೆಂಬರ್ ನಲ್ಲಿ ಮೋಹನ್ ನಾಯಕ್ ಗೆ ಜಾಮೀನು ಮಂಜೂರು ಮಾಡಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.