ಗೃಹ ಸಚಿವ ಅಮಿತ್‌ ಶಾರನ್ನು ಭೇಟಿಯಾದ ಗೌತಮ್‌ ಗಂಭೀರ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ, ಗೌತಮ್‌ ಗಂಭೀರ್‌ ಅವರು ಸೋಮವಾರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದರು.

ಹಿಂದಿನ ಅವಧಿಯಲ್ಲಿ ಪೂರ್ವ ದೆಹಲಿ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದ ಗಂಭೀರ್‌ ಅವರು ಈ ಬಾರಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು.ಭಾರತ ತಂಡದ ಮುಖ್ಯ ಕೋಚ್‌ ಹುದ್ದೆಗೆ ಪ್ರಬಲ ಆಕಾಂಕ್ಷಿಯಾಗಿರುವ ಅವರು ಸಕ್ರಿಯ ರಾಜಕಾರಣದಿಂದ ವಿರಾಮ ಪಡೆದಿದ್ದಾರೆ.

‘ಲೋಕಸಭಾ ಚುನಾವಣಾ ಯಶಸ್ಸಿಗೆ ಅಭಿನಂದನೆ ಸಲ್ಲಿಸಲು ಶಾ ಅವರನ್ನು ಭೇಟಿ ಮಾಡಿದೆ. ಗೃಹ ಸಚಿವರಾಗಿ ಅವರ ನಾಯಕತ್ವವು ನಮ್ಮ ರಾಷ್ಟ್ರದ ಭದ್ರತೆ ಮತ್ತು ಸ್ಥಿರತೆಯನ್ನು ಮತ್ತಷ್ಟು ಬಲಪಡಿಸುತ್ತದೆ’ ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಟಿ20 ವಿಶ್ವಕಪ್‌ ಟೂರ್ನಿಯ ಬಳಿಕ ಮುಖ್ಯ ಕೋಚ್‌ ಸ್ಥಾನದಿಂದ ಕೆಳಗಿಳಿಯುವುದಾಗಿ ದ್ರಾವಿಡ್‌ ಈಗಾಗಲೇ ಘೋಷಿಸಿದ್ದಾರೆ.ರಾಹುಲ್‌ ದ್ರಾವಿಡ್‌ ಅವರ ಸ್ಥಾನಕ್ಕೆ ಗಂಭೀರ್‌ ಅವರ ಹೆಸರು ಬಲವಾಗಿ ಕೇಳಿಬರುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!