ಟೀಮ್ ಇಂಡಿಯಾದ ಮುಖ್ಯ ಕೋಚ್ ಪಟ್ಟಕ್ಕೆ ಗೌತಮ್ ಗಂಭೀರ್ ?

ಹೊಸದಿಗಂತ ಡಿಜಿಟಲ್ ಡೆಸ್ಕ್:

2024ರ ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಕೊನೆಗೊಳ್ಳಲಿದೆ.

ಹೀಗಾಗಿ ಬಿಸಿಸಿಐ ಕೂಡ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

ಆದ್ರೆ ಮತ್ತೊಮ್ಮೆ ಹುದ್ದೆಯಲ್ಲಿ ಮುಂದುವರೆಯಲು ರಾಹುಲ್ ದ್ರಾವಿಡ್​ ಆಸಕ್ತಿ ಹೊಂದಿಲ್ಲ ಎಂದು ವರದಿಯಾಗಿದೆ. ಅಲ್ಲದೆ ಪ್ರಸ್ತುತ ಎನ್​ಸಿಎ ಅಧ್ಯಕ್ಷರಾಗಿರುವ ವಿವಿಎಸ್ ಲಕ್ಷ್ಣಣ್ (VVS Laxman) ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಭಾರತದ ಮಾಜಿ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ (Gautam Gambhir) ಅವರು ಮುಖ್ಯ ಕೋಚ್ ಹುದ್ದೆಗೇರಬಹುದು ಎಂದು ಹೇಳಲಾಗುತ್ತಿದೆ.

ESPNcricinfo ವರದಿಯ ಪ್ರಕಾರ, ಪ್ರಸ್ತುತ ಐಪಿಎಲ್ ಫ್ರಾಂಚೈಸಿ ಕೋಲ್ಕತ್ತಾ ನೈಟ್ ರೈಡರ್ಸ್‌ನ ಮಾರ್ಗದರ್ಶಕರಾಗಿರುವ ಗಂಭೀರ್ ಅವರನ್ನು ಮುಖ್ಯ ಕೋಚ್ ಹುದ್ದೆಗೇರುವಂತೆ ಬಿಸಿಸಿಐ ಮನವಿ ಮಾಡಿದೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಐಪಿಎಲ್​ನಲ್ಲಿ ಕೆಕೆಆರ್​ ತಂಡದ ಭಾಗವಾಗಿರುವ ಗಂಭೀರ್, ಬಿಸಿಸಿಐ ಮನವಿಯನ್ನು ಪುರಸ್ಕರಿಸುತ್ತಾರಾ ಅಥವಾ ತಿರಸ್ಕರಿಸುತ್ತಾರಾ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ. ಒಂದು ವೇಳೆ ಗಂಭೀರ್ ಈ ಮನವಿಗೆ ಒಪ್ಪಿದರೆ ಅವರು ಕೆಕೆಆರ್ ತಂಡವನ್ನು ತೊರೆಯಬೇಕಾಗುತ್ತದೆ. ಏಕೆಂದರೆ ಬಿಸಿಸಿಐ ಒಪ್ಪಂದಕ್ಕೆ ಒಳಪಡುವವರು ಇತರ ಲೀಗ್​ಗಳಲ್ಲಿ ಕೆಲಸ ಮಾಡುವಂತಿಲ್ಲ.

ಗೌತಮ್ ಗಂಭೀರ್‌ಗೆ ಅಂತಾರಾಷ್ಟ್ರೀಯ ಮತ್ತು ದೇಶೀಯ ಮಟ್ಟದಲ್ಲಿ ತರಬೇತಿ ನೀಡಿದ ಅನುಭವವಿಲ್ಲ. ಅವರು ಐಪಿಎಲ್ ಫ್ರಾಂಚೈಸಿಯಲ್ಲಿ ಕೋಚಿಂಗ್ ಸಿಬ್ಬಂದಿಯ ಉಸ್ತುವಾರಿ ವಹಿಸಿದ್ದಾರೆ. ಅವರು ಐಪಿಎಲ್ 2022 ಮತ್ತು 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್‌ನ ಮಾರ್ಗದರ್ಶಕರಾಗಿದ್ದರು. ಪ್ರಸ್ತುತ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾರ್ಗದರ್ಶಕರಾಗಿರುವ ಗಂಭೀರ್ ಅಡಿಯಲ್ಲಿ ಕೆಕೆಆರ್‌ ತಂಡದ ಪ್ರದರ್ಶನ ಅತ್ಯುತ್ತಮವಾಗಿದೆ. ಆಡಿರುವ 13 ಪಂದ್ಯಗಳಲ್ಲಿ 9 ಪಂದ್ಯಗಳಲ್ಲಿ ಗೆದ್ದಿರುವ ತಂಡ 3 ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ 19 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಗಂಭೀರ್, 2007 ರ ಟಿ20 ವಿಶ್ವಕಪ್ ಮತ್ತು 2011 ಏಕದಿನ ವಿಶ್ವಕಪ್ ವಿಜೇತ ಭಾರತೀಯ ತಂಡದ ಭಾಗವಾಗಿದ್ದರು. 2011ರ ವಿಶ್ವಕಪ್‌ನ ಫೈನಲ್‌ನಲ್ಲಿ ಅವರು 122 ಎಸೆತಗಳಲ್ಲಿ 97 ರನ್‌ಗಳ ಮ್ಯಾಚ್‌ವಿನ್ನಿಂಗ್ ಇನ್ನಿಂಗ್ಸ್ ಆಡಿದ್ದರು. ಇದಲ್ಲದೆ ಗೌತಮ್ ಗಂಭೀರ್ ಐಪಿಎಲ್​ನಲ್ಲೂ ತಮ್ಮ ಸಾಮಥ್ಯ್ರ ತೊರಿದ್ದು, 2011 ರಿಂದ 2017 ರವರೆಗೆ 7 ಐಪಿಎಲ್ ಸೀಸನ್‌ಗಳಿಗೆ ಕೆಕೆಆರ್ ತಂಡದ ನಾಯಕತ್ವ ವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!