ಹೊಸದಿಗಂತ ಡಿಜಿಟಲ್ ಡೆಸ್ಕ್:
ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿ ದಿನವಾದ ಇಂದು ಬೆಂಗಳೂರಿನ ಗವಿಗಂಗಾಧರೇಶ್ವರ ದೇವಸ್ಥಾನದ ವಿಸ್ಮಯಕ್ಕೆ ಮೋಡ ಅಡ್ಡಿ ಪಡಿಸಿದ್ದಾನೆ.
ಸಂಜೆ 5:14 ರಿಂದ 5:17 ರವರೆಗೆ ಸೂರ್ಯ ರಶ್ಮಿ ಗವಿಗಂಗಾಧರೇಶ್ವರನನ್ನು ಸ್ಪರ್ಶಿಸಬೇಕಿತ್ತು. ಈ ಪವಾಡ ನೋಡಲು ನೂರಾರು ಭಕ್ತರು ಆಗಮಿಸಿದ್ದರು. ಆದರೆ ಮೋಡ ಕವಿದ ವಾತಾವರಣದಿಂದಾಗಿ ಸೂರ್ಯನ ಕಿರಣಗಳು ಶಿವಲಿಂಗವನ್ನು ತಲುಪಲು ಸಾಧ್ಯವಾಗಲಿಲ್ಲ.
ಮೊದಲಿಗೆ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಅವರು ಪೂರ್ಣಕುಂಭ ಕಳಸದೊಂದಿಗೆ ದೇವಸ್ಥಾನಕ್ಕೆ ಆಗಮಿಸಿ ದೇವರಿಗೆ ಅಭಿಷೇಕ ಮಾಡಿದರು.
ಸೂರ್ಯ ರಶ್ಮಿ ಸ್ಪರ್ಶವಾಗದ ಹಿನ್ನೆಲೆ, ಭಕ್ತರ ಆತಂಕ ದೂರ ಮಾಡಲು ದೇವಾಲಯದಲ್ಲಿ ಶಾಂತಿ ಪೂಜೆ ನೆರವೇರಿಸಲಾಗುತ್ತಿದೆ ಎಂದು ಪ್ರಧಾನ ಅರ್ಚಕರು ತಿಳಿಸಿದ್ದಾರೆ.