July 21, 2026
Tuesday, July 21, 2026
spot_img

ಶಿವಾಜಿನಗರದಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್‌ ಸ್ಪ್ರೇ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನಲ್ಲಿ ಫುಟ್‌ಪಾತ್‌ ತೆರವು ಕಾರ್ಯಾಚರನೆ ಜಾರಿಯಲ್ಲಿದೆ. ಶಿವಾಜಿನಗರದಲ್ಲಿ ಜಿಬಿಎ ವತಿಯಿಂದ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಸ್ಥಳೀಯ ಸಂಘಟನೆಗಳ ಸದಸ್ಯರು ಪಾಲಿಕೆ ಸಿಬ್ಬಂದಿ ಮತ್ತು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು. ಜೆಸಿಬಿ ಬಳಸಿ ಫುಟ್​ಪಾತ್ ಅತಿಕ್ರಮಣಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಸಿಬ್ಬಂದಿ ಮುಂದಾದಾಗ, ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಅಡ್ಡಿಪಡಿಸಿದರು. ಈ ವೇಳೆ, ಪಾಲಿಕೆಯ ಇಂಜಿನಿಯರ್‌ಗಳು ಮತ್ತು ಜೆಸಿಬಿ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಗಳು ಕೇಳಿಬಂದಿವೆ. ಒಬ್ಬ ಪಾಲಿಕೆ ಸಿಬ್ಬಂದಿಯ ಮೇಲೆ ಹೆಲ್ಮೆಟ್‌ನಿಂದ ಹಲ್ಲೆ ಮಾಡಲು ಪ್ರಯತ್ನಿಸಲಾಯಿತು ಎಂದು ಪಾಲಿಕೆ ಸಿಬ್ಬಂದಿ ತಿಳಿಸಿದ್ದಾರೆ. ಅಲ್ಲದೆ, ಜೆಸಿಬಿ ಚಾಲಕನ ಮೇಲೆ ಪೆಪ್ಪರ್ ಸ್ಪ್ರೇ ಮಾಡಲಾಯಿತು ಎಂದೂ ಅವರು ಆರೋಪಿಸಿದ್ದಾರೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳದಲ್ಲಿದ್ದ ಪೊಲೀಸರು ಮಧ್ಯಪ್ರವೇಶಿಸಿದರು. ಹಲ್ಲೆ ಯತ್ನದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಉದ್ವಿಗ್ನ ಪರಿಸ್ಥಿತಿಯಿಂದಾಗಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಪಾಲಿಕೆ ಸಿಬ್ಬಂದಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಗೆ ತೆರಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !